ಸಾಂದರ್ಭಿಕ ಚಿತ್ರ 
ದೇಶ

ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಆಗಸ್ಟ್ 23ರಂದು ಉಪ ಚುನಾವಣೆ

ವಿವಿಧ ರಾಜ್ಯಗಳಲ್ಲಿ ತೆರವಾಗಿದ್ದ ನಾಲ್ಕು ವಿಧಾಸಭಾ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಗುರುವಾರ ಚುನಾವಣಾ ದಿನಾಂಕ ಪ್ರಕಟಿಸಿದ್ದು,

ನವದೆಹಲಿ: ವಿವಿಧ ರಾಜ್ಯಗಳಲ್ಲಿ ತೆರವಾಗಿದ್ದ ನಾಲ್ಕು ವಿಧಾಸಭಾ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಗುರುವಾರ ಚುನಾವಣಾ ದಿನಾಂಕ ಪ್ರಕಟಿಸಿದ್ದು, ಆಗಸ್ಟ್ 23ರಂದು ಮತದಾನ ನಡೆಯಲಿದೆ.
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಸ್ಪರ್ಧಿಸಲಿರುವ ಪಣಜಿ, ವಲ್ಪೋಯಿ, ದೆಹಲಿಯ ಬವನ ಹಾಗೂ ಆಂಧ್ರಪ್ರದೇಶದ ನಂದ್ಯಾಲ್ ವಿಧಾನಸಭಾ ಕ್ಷೇತ್ರಗಳಿಗೆ ಆಗಸ್ಟ್ 23ರಂದು ಚುನಾವಣೆ ನಡೆಯಲಿದೆ.
ಈ ನಾಲ್ಕು ಕ್ಷೇತ್ರಗಳ ಉಪ ಚುನಾವಣೆಗೆ ಜುಲೈ 29ರಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸುತ್ತಿದ್ದು, ನಾಮಪತ್ರ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನವಾಗಿದೆ. ಆಗಸ್ಟ್ 9 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಆಗಸ್ಟ್ 28ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ಎಎಪಿ ಶಾಸಕ ವೇದ್ ಪ್ರಕಾಶ್ ಅವರು ಬವನ ಕ್ಷೇತ್ರಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ಆ ಕ್ಷೇತ್ರ ತೆರವಾಗಿತ್ತು. ಇನ್ನು ಸಂಸದರಾಗಿದ್ದ ಮನೋಹರ್ ಪರಿಕ್ಕರ್ ಅವರು ಗೋವಾ ಮುಖ್ಯಮಂತ್ರಿಯಾಗಿ ಆಯ್ಕೆಯಾದ ನಂತರ ಅವರಿಗೆ ಪಣಜಿ ಶಾಸಕ ಸಿದ್ಧಾರ್ಥ್ ಕುಂಕಲಿಂಕರ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
ವಲ್ಪೋಯಿ ಕಾಂಗ್ರೆಸ್ ಶಾಸಕರಾಗಿದ್ದ ವಿಶ್ವಜೀತ್ ರಾಣೆ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದರು. ಟಿಡಿಪಿ ಶಾಸಕರ ಅಕಾಲಿಕ ನಿಧನದಿಂದಾಗಿ ನಂದ್ಯಾಲ್ ಕ್ಷೇತ್ರ ತೆರವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!