ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ 
ದೇಶ

ಬಿಹಾರ ಜನತೆಗೆ ನಿತೀಶ್ ಹೇಗೆ ಮುಖ ತೋರಿಸುತ್ತಾರೆ?: ಲಾಲೂ ಪ್ರಸಾದ್ ಯಾದವ್

ಬಿಜೆಪಿಗೆ ಮತ್ತೆ ಸೇರ್ಪಡೆಗೊಳ್ಳುವುದಿಲ್ಲ ಎಂದು ಹೇಳಿ ಅಧಿಕಾರ ಸ್ವೀಕಾರ ಮಾಡಿದ್ದ ನಿತೀಶ್ ಕುಮಾರ್ ಅವರು ಇದೀಗ ಬಿಹಾರ ಜನತೆಗೆ ಹೇಗೆ ಮುಖ ತೋರಿಸುತ್ತಾರೆ ಎಂದು ರಾಷ್ಟ್ರೀಯ ಜನತಾ ದಳ...

ಪಾಟ್ನ: ಬಿಜೆಪಿಗೆ ಮತ್ತೆ ಸೇರ್ಪಡೆಗೊಳ್ಳುವುದಿಲ್ಲ ಎಂದು ಹೇಳಿ ಅಧಿಕಾರ ಸ್ವೀಕಾರ ಮಾಡಿದ್ದ ನಿತೀಶ್ ಕುಮಾರ್ ಅವರು ಇದೀಗ ಬಿಹಾರ ಜನತೆಗೆ ಹೇಗೆ ಮುಖ ತೋರಿಸುತ್ತಾರೆ ಎಂದು ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಗುರುವಾರ ಪ್ರಶ್ನೆ ಮಾಡಿದ್ದಾರೆ. 
ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಲಾಲೂ ಪ್ರಸಾದ್ ಯಾದವ್ ಅವರು ರಾಂಚಿಗೆ ತೆರಳಿದ್ದಾರೆ. ಆರ್ ಜೆಡಿ ಜೊತೆ ಮೈತ್ರಿ ಕಡಿದುಕೊಂಡು ಬಿಜೆಪಿ ಜೊತೆ ಸೇರಿ ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಸರ್ಕಾರ ರಚನೆ ಮಾಡಿರುವ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ತತ್ವಗಳನ್ನೊಳಗೊಂಡಿರುವ ಮನುಷ್ಯನಾಗಿದ್ದೇನೆ. ಈ ಹಿಂದೆ ಅಧಿಕಾರ ಸ್ವೀಕರಿಸುವಾಗ ನಿತೀಶ್ ಕುಮಾರ್ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಗೊಳ್ಳುವುದಿಲ್ಲ ಎಂದು ಹೇಳಿದ್ದರು. ಇದೀಗ ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದು,  ಬಿಹಾರ ಜನತೆಗೆ ಹೇಗೆ ಮುಖ ತೋರಿಸುತ್ತಾರೆಂದು ಕೇಳಿದ್ದಾರೆ. 
ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ನಿತೀಶ್ ಅವರು ಬಿಹಾರ ರಾಜ್ಯದ ಜನತೆಗೆ ಹಾಗೂ ನಮಗೆ ದ್ರೋಹ ಮಾಡಿದ್ದಾರೆ. 2019ರ ಚುನಾವಣೆ ವೇಳೆ ತೇಜಸ್ವಿ ಪ್ರಬಲ ಎದುರಾಳಿಯಾಗಲಿದ್ದಾರೆಂಬುದನ್ನು ಅರಿತ ಬಿಜೆಪಿ, . ತೇಜಸ್ವಿ ವಿರುದ್ಧ ಬಿಜೆಪಿ ಷಡ್ಯಂತ್ರ ರೂಪಿಸಿದೆ. ಪ್ರಸ್ತುತದ ಎಲ್ಲಾ ಬೆಳವಣಿಗೆಗಳಿಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪಿತೂರಿಯೇ ಕಾರಣ ಎಂದು ತಿಳಿಸಿದ್ದಾರೆ. 
ಕಳೆದ 15-20 ವರ್ಷಗಳಿಂದ ನಾನು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಿದ್ದೇನೆ. ತರಾತುರಿಯಲ್ಲಿ ನನಗೆ ಶಿಕ್ಷೆಯನ್ನು ನೀಡಲಾಯಿತು. ಬಿಜೆಪಿ ಜೊತೆಗೆ ಕೈಜೋಡಿಸಿ ನಿತೀಶ್ ಕುಮಾರ್ ಅವರು ನನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ. ನಿತೀಶ್ ಕುಮಾರ್ ಒಬ್ಬ ದೊಡ್ಡ ಅವಕಾಶವಾದಿ.

ಮಣ್ಣಿನಲ್ಲಿ ಮಣ್ಣಾದರೂ ಬಿಜೆಪಿ ಜೊತೆಗೆ ಕೈಜೋಡಿಸುವುದಿಲ್ಲ ಎಂದು ನಿತೀಶ್ ಹೇಳಿದ್ದರು. ಅಧಿಕಾರಕ್ಕೇರುವ ಸಂದರ್ಭದಲ್ಲಿ ರಾಜ್ಯದಲ್ಲಿ ಅಧಿಕಾರ ನಡೆಸುವಂತೆ ತಿಳಿಸಿ ನಿತೀಶ್ ಅವರ ಹಣೆಗೆ ತಿಲಕವನ್ನು ಇಟ್ಟಿದ್ದೆ. ನನ್ನ ಹೃದಯದಲ್ಲಿ ಯಾವ ದುರಾಸೆಯೂ ಇರಲಿಲ್ಲ. ಆ ರೀತಿ ಇದ್ದಿದ್ದೇ ಆಗಿದ್ದರೆ, ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಏಕೆ ಘೋಷಣೆ ಮಾಡುತ್ತಿದ್ದೆ. ಪ್ರಸ್ತುತ ಬಿಹಾರದಲ್ಲಿ ನಡೆದಿರುವ ಬೆಳವಣಿಗೆಗಳು ಪೂರ್ವಯೋಜಿತವಾದದ್ದು. ನಿತೀಶ್ ಅವರಿಗೆ ನಾನು ಯಾವ ತೊಂದರೆಗಳನ್ನು ನೀಡಿರಲಿಲ್ಲ. ಹಲವು ಸಂದರ್ಭಗಳಲ್ಲಿ ನಿತೀಶ್ ಅವರು ಮೋದಿಯವರನ್ನು ಭೇಟಿ ಮಾಡಿ, ಭೋಜನಕೂಟದಲ್ಲಿ ಭಾಗಿಯಾಗಿದ್ದರು. ಈ ಎಲ್ಲಾ ಬೆಳವಣಿಗೆಗಳನ್ನು ನೋಡಿದರೆ, ಇವೆಲ್ಲಾ ಪೂರ್ವಯೋಜಿತವಾದದ್ದು ಎಂಬುದು ತಿಳಿದುಬರುತ್ತದೆ. 

ಕೆಲ ಮಾಧ್ಯಮಗಳನ್ನು ನಾವು ಉತ್ತಮ ಮಾಧ್ಯಮಗಳೆಂದು ಪರಿಗಣಿಸುತ್ತೇವೆ. ಕೆಲ ಮಾಧ್ಯಮಗಳು ಸುಪಾರಿಗಳನ್ನು ತೆಗೆದುಕೊಂಡು ಸುದ್ದಿ ಮಾಡುತ್ತವೆ. ಟ್ರಂಪ್ ವಿರುದ್ಧ ಅಮೆರಿಕದಲ್ಲಿ ಮಾಧ್ಯಮಗಳು ಯಾವ ರೀತಿ ಹೋರಾಟ ಮಾಡುತ್ತಿವೆ ಎಂಬುದನ್ನು ನಾವು ನೋಡಬಹುದು. ಆದರೆ ಇಲ್ಲಿನ ಮಾಧ್ಯಮಗಳು ವಿರೋಧ ಪಕ್ಷಗಳ ವಿರುದ್ಧವೇ ಹೋರಾಟ ಮಾಡುತ್ತವೆ. 

ಅಮಿತ್ ಶಾ ಅವರು ಅತ್ಯುತ್ತಮ ಸಂಪಾದಕ. ಸುದ್ದಿ ಹೇಗಿರಬೇಕೆಂಬುದನ್ನು ಶಾ ಅವರೇ ನಿರ್ಧರಿಸಿ, ಮಾಧ್ಯಮಗಳ ಮಾಲೀಕರಿಗೆ, ಸಂಪಾದಕರಿಗೆ ತಿಳಿಸುತ್ತದೆ. ಇದರಲ್ಲಿ ಪತ್ರಕರ್ತರ ಯಾವ ತಪ್ಪೂ ಇಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)