ಬಿಹಾರ ರಾಜ್ಯಪಾಲರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ: ಲಾಲು
ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ ಬಿಹಾರ ರಾಜ್ಯಪಾಲ ಕೇಶರಿನಾಥ್ ತ್ರಿಪಾಠಿ ಅವರ....
ನವದೆಹಲಿ: ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ ಬಿಹಾರ ರಾಜ್ಯಪಾಲ ಕೇಶರಿನಾಥ್ ತ್ರಿಪಾಠಿ ಅವರ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಗುರುವಾರ ಹೇಳಿದ್ದಾರೆ.
ಬಿಹಾರದಲ್ಲಿ ಆರ್ ಜೆಡಿ ಏಕೈಕ ದೊಡ್ಡ ಪಕ್ಷವಾಗಿದ್ದು, ಬೇರೆ ಪಕ್ಷಕ್ಕೆ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಬಾರದಿತ್ತು ಎಂದು ಲಾಲು ಪ್ರಸಾದ್ ಯಾದವ್ ಅವರು ಹೇಳಿದ್ದಾರೆ.
ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ನಾವು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವ ಬಗ್ಗೆ ಚಿಂತನೆ ನಡೆಸಿದ್ದು, ಈ ಕುರಿತು ಕಾನೂನು ಸಲಹೆಗಾರರೊಂದಿಗೆ ಚರ್ಚಿಸಿ ಕೋರ್ಟ್ ಮೊರೆ ಹೋಗವುದಾಗಿ ಲಾಲು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ನಿತೀಶ್ ಅವರು ಬಿಹಾರ ರಾಜ್ಯದ ಜನತೆಗೆ ಹಾಗೂ ನಮಗೆ ದ್ರೋಹ ಮಾಡಿದ್ದಾರೆ. 2019ರ ಚುನಾವಣೆ ವೇಳೆ ತೇಜಸ್ವಿ ಪ್ರಬಲ ಎದುರಾಳಿಯಾಗಲಿದ್ದಾರೆಂಬುದನ್ನು ಅರಿತ ಬಿಜೆಪಿ, . ತೇಜಸ್ವಿ ವಿರುದ್ಧ ಬಿಜೆಪಿ ಷಡ್ಯಂತ್ರ ರೂಪಿಸಿದೆ. ಪ್ರಸ್ತುತದ ಎಲ್ಲಾ ಬೆಳವಣಿಗೆಗಳಿಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪಿತೂರಿಯೇ ಕಾರಣ ಎಂದು ಲಾಲು ಆರೋಪಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.