ನವದೆಹಲಿ: ಸೂಕ್ಷ್ಮ ಸೇನಾ ನೆಲೆಗಳಲ್ಲಿ ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಭಾರತೀಯ ಸೇನೆಗೆ ಹೆಚ್ಚಿನ ಹಣಕಾಸಿನ ಅಧಿಕಾರವನ್ನು ನೀಡಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
ಕೇಂದ್ರ ರಕ್ಷಣಾ ಸಚಿವ ಅರುಣ್ ಜೇಟ್ಲಿ, ಪ್ರಮುಖ ಸೇನಾ ನೆಲೆಗಳನ್ನು ಭದ್ರತೆಯನ್ನು ಹೆಚ್ಚಿಸುವ ಕೆಲಸಗಳಿಗೆ ಕಾಲಮಿತಿಯನ್ನು ನಿಗದಿಪಡಿಸಿದ್ದಾರೆ. ಅದರಂತೆ ಸೇನಾ ನೆಲೆಗಳ ಭದ್ರತೆಯನ್ನು ಹೆಚ್ಚಿಸಲು ಸೇನಾ ಪಡೆಗೆ ಹೆಚ್ಚಿನ ಹಣಕಾಸಿನ ಅಧಿಕಾರ ನೀಡಲಾಗುತ್ತಿದೆ ಎಂದು ರಕ್ಷಣಾ ಇಲಾಖೆ ಹೇಳಿದೆ.
ಪಠಾಣ್ ಕೋಟ್ ಸೇನಾ ನೆಲೆಯ ಭದ್ರತೆಗೆ ವಾರ್ಶಿಕವಾಗಿ 800 ಕೋಟಿ ರೂಪಾಯಿ ಸಿಗಲಿದೆ. ಅಷ್ಟೇ ಅಲ್ಲದೇ ರಕ್ಷಣಾ ಸಚಿವಾಲಯದ ಅನುಮತಿ ಪಡೆಯದೇ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ನೀಡಲಾಗಿದೆ ಎಂದು ರಕ್ಷಣಾ ಇಲಾಖೆ ಹೇಳಿದೆ.