ಲಕ್ನೋ: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಡಿಪೋದಲ್ಲಿ ಡಿಸೇಲ್ ಮತ್ತು ಪೆಟ್ರೋಲ್ ಕದ್ದ ಆರೋಪದ ಮೇಲೆ 12 ಮಂದಿಯನ್ನು ಬಂಧಿಸಲಾಗಿದೆ ಎಂದು ಲಕ್ನೋ ಪೊಲೀಸರು ತಿಳಿಸಿದ್ದಾರೆ.
ಕದ್ದ ಪೆಟ್ರೋಲ್ ಮತ್ತು ಡಿಸೇಲ್ ಸಾಗಿಸಲು ಬಳಸುತ್ತಿದ್ದ 5 ವಾಹನಗಳು 900 ಲೀಟರ್ ಡಿಸೇಲ್ ಮತ್ತು 70 ಲೀಟರ್ ಸೀಮೆ ಎಣ್ಣೆ 40 ಕಂಟೈನ ರ್ ಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳಿಂದ 7 ಮೊಬೈಲ್ ಫೋನ್, 71,370 ರು ನಗದನ್ನು ಕೂಡ ವಶಪಡಿಸಿಕೊಳ್ಳಲಾಗಿದೆ. 12 ಮಂದಿ ವಿರುದ್ಧ ದೂರು ದಾಖಲಾಗಿದ್ದು, ಉಳಿದ ಆರು ಮಂದಿಗಾಗಿ ಶೋಧ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.