ಸೇನಾ ಮುಖ್ಯಸ್ಥ ಬಿಪಿನ್ ರಾವತ್ 
ದೇಶ

ಸದಾಕಾಲ ಸನ್ನದ್ಧರಾಗಿರಿ: ಯೋಧರಿಗೆ ಸೇನಾ ಮುಖ್ಯಸ್ಥರ ಸೂಚನೆ

ಯಾವುದೇ ಪರಿಸ್ಥಿತಿ ಎದುರಿಸಲು ಸದಾಕಾಲ ಸನ್ನದ್ಧರಾಗಿರಿ ಎಂದು ಭಾರತೀಯ ಸೇನಾ ಯೋಧರಿಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ...

ಶ್ರೀನಗರ: ಯಾವುದೇ ಪರಿಸ್ಥಿತಿ ಎದುರಿಸಲು ಸದಾಕಾಲ ಸನ್ನದ್ಧರಾಗಿರಿ ಎಂದು ಭಾರತೀಯ ಸೇನಾ ಯೋಧರಿಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ. 
ನಿನ್ನೆಯಷ್ಟೇ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು, ಗಡಿ ನಿಯಂತ್ರಣ ರೇಖೆ ಬಳಿಯಿರುವ ಪರಿಸ್ಥಿತಿಯನ್ನು ಅವಲೋಕಿಸಿಸಿದರು.
ಜಮ್ಮು ರಕ್ಷಣಾ ವಕ್ತಾರ ಲೆ.ಕ.ಮನೀಷ್ ಮೆಹ್ತಾ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರೊಂದಿಗೆ  ಉತ್ತರ ಸೇನಾವಲಯದ ಜನರಲ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಲೆ.ಜ ದೇವರಾಜ್ ಅನ್ಬು ಜಮ್ಮುವಿನ 16 ಕಾರ್ಪ್ಸ್ ಮುಖ್ಯ ಕಚೇರಿಗೆ ಭೇಟಿ ನೀಡಿ ಸೇನಾ ಕಾರ್ಯಾಚರಣೆಗಳ ತಯಾರಿ ಹಾಗೂ ರಾಜ್ಯದಲ್ಲಿ ಪರಿಸ್ಥಿತಿ ನಿಭಾಯಿಸಲು ತೆಗೆದುಕೊಂಡಿರುವ ಕ್ರಮಗಳ ಕುರಿತಂತೆ ಪರಿಶೀಲನೆ ನಡೆಸಿದರು ಎಂದು ಹೇಳಿದ್ದಾರೆ. 
ಭೇಟಿ ವೇಳೆ 16 ಕಾರ್ಪ್ಸ್ ಜನರಲ್ ಆಫೀಸರ್ ಕಮಾಂಡಿಂಗ್ ಲೆ.ಜ. ಎ.ಕೆ.ಶರ್ಮಾ ಅವರು ಸೇನೆಯ ತಯಾರಿ ಕುರಿತಂತೆ ಮಾಹಿತಿ ನೀಡಿದರು. ಈ ವೇಳೆ ಯೋಧರಿಗೆ ಸೂಚನೆ ನೀಡಿದ ರಾವತ್ ಅವರು, ಯಾವುದೇ ಪರಿಸ್ಥಿತಿ ಎದುರಿಸಲು ಸದಾಕಾಲ ಸನ್ನದ್ಧರಾಗಿರುವಂತೆ ತಿಳಿಸಿದರು. ಭಾರತದೊಳಗೆ ನುಸುಳಲು ಉಗ್ರರಿಗೆ ಪಾಕಿಸ್ತಾನ ಸೇನೆ ಸಹಾಯ ಮಾಡುತ್ತಿದ್ದು, ಗಡಿಯಲ್ಲಿ ಸದಾಕಾಲ ಕಣ್ಗಾವಲಿರಿಸುವಂತೆ ತಿಳಿಸಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್