ಅಹ್ಮದ್ ಪಟೇಲ್ 
ದೇಶ

ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಗೆಲುವು ಅಸಾಧ್ಯ: ಗುಜರಾತ್ ಕಾಂಗ್ರೆಸ್ ಶಾಸಕ

ಮತ್ತಷ್ಟು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡುವ ಕಾರಣದಿಂದ ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್...

ಅಹಮದಾಬಾದ್: ಮುಂಬರುವ ದಿನಗಳಲ್ಲಿ ಮತ್ತಷ್ಟು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡುವ ಕಾರಣದಿಂದ ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಗೆಲುವು ಸಾಧ್ಯವಿಲ್ಲ ಎಂದು ಗುಜರಾತ್ ಶಾಸಕ ರಾಘ್ವಾಜೆ ಪಟೇಲ್ ಹೇಳಿದ್ದಾರೆ.
ಶಂಕರ್ ಸಿಂಗ್ ವಘೇಲಾ ಅವರ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಶಾಸಕ ರಾಘ್ವಾಜೆ ಪಟೇಲ್ ತಾವು ಕೂಡ ಶೀಘ್ರವೇ ಬಿಜೆಪಿ ಸೇರುವ ಸುಳಿವು ನೀಡಿದ್ದಾರೆ.
ಆಗಸ್ಟ್ 8 ರಂದು ನಡೆಯುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಅಹ್ಮದ್ ಪಟೇಲ್ ಸ್ಪರ್ಧಿಸಿದ್ದಾರೆ. ಸದ್ಯ ಪಕ್ಷದಲ್ಲಿ ಉಂಟಾಗಿರುವ ಎಲ್ಲಾ ಬೆಳವಣಿಗೆಗಳಿಗೆ ರಾಜ್ಯ ಮತ್ತು ರಾಷ್ಚ್ರೀಯ ಕಾಂಗ್ರೆಸ್ ಹೊಣೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಕೇವಲ 20 ಶಾಸಕರು ಮಾತ್ರ ಪಕ್ಷದೊಂದಿಗಿದ್ದಾರೆ. ಹೀಗಿರುವಾಗ ರಾಜ್ಯಸಭಾ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಗೆಲ್ಲುವುದು ಸಾಧ್ಯವಿಲ್ಲ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇತ್ತೀಚಿಗೆ ನಾನು ಅಹ್ಮದ್ ಪಟೇಲ್ ಅವರನ್ನು ಭೇಟಿ ಮಾಡಿದ್ದೆ. ನನಗೆ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಮಾಹಿತಿಯಿದ್ದ ಕಾರಣ ನಾನು ಅವರನ್ನು, ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ ಎಂದು ಹೇಳಿದ್ದೆ. ಯಾವುದೇ ಕಾರಣಕ್ಕೂ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಗುಜರಾತ್ ನಲ್ಲಿ ಕೇವಲ ಎರಡು ಪ್ರಮುಖ ಪಕ್ಷಗಳಿವೆ,  ಒಂದು ವೇಳೆ ನಾನು ಕಾಂಗ್ರೆಸ್ ತ್ಯಜಿಸಿದರೇ ನನಗೆ ಇರುವ ಅವಕಾಶ ಒಂದೇ , ಅದು ಬಿಜೆಪಿ, ಜಾಮಾನಗರದ ಮತ್ತೊಬ್ಬ ಶಾಸಕ ಧರ್ಮೇಂದ್ರ ಸಿನ್ಹಾ ಜಡೇಜಾ  ಕಾಂಗ್ರೆಸ್ ಬಿಡುವ ಬಗ್ಗೆ ಸುಳಿವು ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT