ರಾಷ್ಟ್ರಪತಿ ರಾಮನಾಥ್ ಕೋವಿಂದ್
ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಕೇವಲ ದಲಿತ ಸಮುದಾಯದ ನಾಯಕರಂತೆ ನೋಡಬಾರದು ಕೇಂದ್ರ ಸರ್ಕಾರ ಶನಿವಾರ ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಕೇಂದ್ರ ನಗರಾಭಿವೃದ್ಧಿ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ರಾಮನಾಥ್ ಕೋವಿಂದ್ ಅವರು ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಈಗಲೂ ಅವರನ್ನು ಕೇವಲ ದಲಿತ ಸಮುದಾಯದ ನಾಯಕರಂತೆಯೇ ನೋಡಬಾರದು ಎಂದು ಹೇಳಿದ್ದಾರೆ.
ರಾಷ್ಟ್ರಪತಿ ಚುನಾವಣೆ ಹತ್ತಿರಬರುತ್ತಿದ್ದಂತೆಯೇ ಕೇಂದ್ರದ ಆಡಳಿತಾರೂಢ ಎನ್ ಡಿಎ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ಯಾರು ಎಂಬ ಕುತೂಹಲಗಳು ಎಲ್ಲರಲ್ಲೂ ಮೂಡತೊಡಗಿದ್ದವು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಯಾರೂ ಊಹಿಸದೆ ಇದ್ದಂತಹ ಎನ್ ಡಿಎ ಅಭ್ಯರ್ಥಿಯನ್ನಾಗಿ ಬಿಹಾರದ ರಾಜ್ಯಪಾಲ ರಾಮನಾಥ್ ಕೋವಿಂದ್ ಅವರ ಹೆಸರನ್ನು ಘೋಷಿಸುತ್ತಿದ್ದಂತೆಯೇ ಪ್ರತಿಪಕ್ಷಗಳೂ ಸೇರಿದಂತೆ ಅಲ್ಲರಿಗೂ ಅಚ್ಚರಿಯಾಗಿತ್ತು.
ಪರ ವಿರೋಧ ಅಭಿಪ್ರಾಯ, ಟೀಕೆಗಳ ನಡುವೆಯೂ ಚುನಾವಣಾ ಕಣದಲ್ಲಿ ನಿಂತ ಕೋವಿಂದ್ ಅವರು, ಪ್ರತಿಪಕ್ಷಗಳ ಅಭ್ಯರ್ಥಿ ಮೀರಾಕುಮಾರ್ ಗಿಂತ ಅಧಿಕ ಮತಗಳನ್ನು ಪಡೆದು ದೇಶದ ಅತ್ಯುನ್ನತ ಪದವಿಯನ್ನು ಅಲಂಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics