ಜೋಧ್ ಪುರ: ಗುಜರಾತ್ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಜಾನುವಾರುಗಳಿಗೆ ಹೋಲಿಸಿದ್ದಾರೆ.
ಆಪರೇಷನ್ ಕಮಲದ ಭೀತಿಯಿಂದ ಗುಜರಾತ್ ಕಾಂಗ್ರೆಸ್ ತನ್ನ ಶಾಸಕರನ್ನು ಬೆಂಗಳೂರಿನ ರೆಸಾರ್ಟ್ ಗಳಲ್ಲಿ ವಾಸ್ತವ್ಯ ಹೂಡಿಸಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ ಅವರು ಜಾನುವಾರುಗಳು ಕಾಂಗ್ರೆಸ್ ಪಂಜರದಲ್ಲಿದ್ದು ಅವರಿಗೆ ಬಿಜೆಪಿ ಮಾತ್ರ ಮೇವು ನೀಡಬಲ್ಲದು ಎಂದು ಹೇಳಿದ್ದಾರೆ.
ಗುಜರಾತ್ ನ ಆರು ಕಾಂಗ್ರೆಸ್ ಶಾಸಕರು ರಾಜಿನಾಮೆ ನೀಡಿದ್ದ ಹಿನ್ನೆಲೆ ಮತ್ತಷ್ಟು ಶಾಸಕರು ಆಪರೇಷನ್ ಕಮಲಕ್ಕೊಳಗಾಗುವರೆಂಬ ಭೀತಿಯಲ್ಲಿ ಗುಜರಾತ್ ನ 44 ಕೈ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿತ್ತು.
ರಾಷ್ಟ್ರಪತಿ ಚುನಾವಣೆಯಲ್ಲಿ ಗುಜರಾತ್ ನ ಕೆಲ ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ್ದರು. ಇದರಿಂದ ಮುಂದಿನ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಅಹ್ಮದ್ ಪಟೇಲ್ ಅವರನ್ನು ಗೆಲ್ಲಿಸಿಕೊಳ್ಳಲು ಕಾಂಗ್ರೆಸ್ ರೆಸಾರ್ಟ್ ರಾಜಕಾರಣಕ್ಕೆ ಮುಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics