ಸಾಂದರ್ಭಿಕ ಚಿತ್ರ 
ದೇಶ

ಭಯೋತ್ಪಾದನೆಗೆ ಹಣಕಾಸು ನೆರವು: ಗಿಲಾನಿ ಆಪ್ತರ ಮನೆ ಮೇಲೆ ಎನ್ಐಎ ದಾಳಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸು ನೆರವು ನೀಡಿತ್ತರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ....

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸು ನೆರವು ನೀಡಿತ್ತರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಭಾನುವಾರ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಆಪ್ತರಿಗೆ ಸೇರಿದಂತೆ ಎರಡು ಸ್ಥಳಗಳ ಮೇಲೆ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯ ಬೆನ್ನಲ್ಲೇ ತನಿಖಾ ಸಂಸ್ಥೆ ಗಿಲಾನಿಯ ಎರಡನೇ ಪುತ್ರ ನಸೀಮ್ ಗೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಅಲ್ಲದೆ ಗಿಲಾನಿ ಹಿರಿಯ ಪುತ್ರ ನಯೀಮ್ ಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಪ್ರತ್ಯೇಕತಾವಾದಿ ಗುಂಪುಗಳಿಗೆ ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಹಣ ಸರಬರಾಜು ಮಾಡಲಾಗಿದೆ ಎಂಬ ಆಪಾದನೆಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಎನ್​ಐಎ ಇಂದು ಎರಡನೇ ಬಾರಿ ಕಾಶ್ಮೀರದಲ್ಲಿ ದಾಳಿ ನಡೆಸಿದೆ. ಈ ಹಿಂದೆ ಪ್ರತ್ಯೇಕತಾವಾದಿ ನಾಯಕರಿಗೆ ಸೇರಿದ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ, 1.5 ಕೋಟಿ ರೂ. ನಗದು ವಶಪಡಿಸಿಕೊಂಡಿದೆ.
ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಅವರ ಅಳಿಯ ಅಲ್ತಾಫ್ ಫಂತೂಶ್, ಉದ್ಯಮಿ ಝುಹರ್ ವಟಾಲಿ, ಮಿರ್ವಾಜ್ ಉಮರ್ ಫಾರೂಕ್ ನೇತೃತ್ವದ ಅವಾಮಿ ಕ್ರಿಯಾ ಸಮಿತಿ ನಾಯಕ ಶಾಹಿದ್-ಉಲ್-ಇಸ್ಲಾಂ ಮತ್ತು ಹುರಿಯತ್ ಕಾನ್ಪರೆನ್ಸ್, ಜೆಕೆಎಲ್​ಎಫ್ ಬಣಗಳ ಎರಡನೇ ಹಂತದ ಪ್ರತ್ಯೇಕತಾವಾದಿ ನಾಯಕರ ಮೇಲೆ ದಾಳಿ ನಡೆಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ