ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ 
ದೇಶ

ಪ್ರಜಾಪ್ರಭುತ್ವದಲ್ಲಿ ರಾಜಕೀಯ ಹಿಂಸಾಚಾರ ಒಪ್ಪಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್

ರಾಷ್ಟ್ರೀಯ ಸ್ವಯಂ ಸೇವಕದ ಮತ್ತೊಬ್ಬ ಕಾರ್ಯಕರ್ತನನ್ ನು ಹತ್ಯೆ ಮಾಡುವ ಮೂಲಕ ಕೇರಳ ರಾಜ್ಯದಲ್ಲಿ ಕಾನೂನು...

ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕದ ಮತ್ತೊಬ್ಬ ಕಾರ್ಯಕರ್ತನನ್ ನು ಹತ್ಯೆ ಮಾಡುವ ಮೂಲಕ ಕೇರಳ ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ರಾಜನಾಥ್ ಸಿಂಗ್, ಅಪರಾಧಿಗಳನ್ನು ಬಂಧಿಸಿ ನ್ಯಾಯ ತನ್ನಿ ಎಂದು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರಿಗೆ ಕರೆ ನೀಡಿದ್ದಾರೆ.
ಟ್ವಿಟ್ಟರ್ ನಲ್ಲಿ ಬರೆದಿರುವ ರಾಜನಾಥ್ ಸಿಂಗ್, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ರಾಜಕೀಯ ಹಿಂಸಾಚಾರ ಸ್ವೀಕಾರಾರ್ಹ ಕ್ರಮವಲ್ಲ ಎಂದು ಹೇಳಿದ್ದಾರೆ.
ಕೇರಳ  ರಾಜ್ಯದಲ್ಲಿ ಇತ್ತೀಚಿನ ರಾಜಕೀಯ ಹಿಂಸಾಚಾರದ ಕುರಿತು ಕೇರಳ ಮುಖ್ಯಮಂತ್ರಿ ಪಿ. ವಿಜಯನ್ ಅವರೊಂದಿಗೆ ಮಾತನಾಡಿದ್ದೇನೆ. ಅಲ್ಲಿನ ಕಾನೂನು, ಸುವ್ಯವಸ್ಥೆ ಬಗ್ಗೆ ನನಗೆ ಇರುವ ಆತಂಕವನ್ನು ಹೇಳಿದ್ದೇನೆ. ಪ್ರಜಾಪ್ರಭುತ್ವದಲ್ಲಿ ರಾಜಕೀಯ ಹಿಂಸಾಚಾರವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಹದಗೆಟ್ಟ ಪರಿಸ್ಥಿತಿಯಲ್ಲಿ ಕಾನೂನು, ಸುವ್ಯವಸ್ಥೆಯನ್ನು ತರಲು ಪ್ರಯತ್ನ ಮಾಡುವಂತೆ ಕೇರಳ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ