ದೇಶ

ಉಪರಾಷ್ಟ್ರಪತಿ ಚುನಾವಣೆ: ಯುಪಿಎ ಅಭ್ಯರ್ಥಿ ಗೋಪಾಲ್ ಕೃಷ್ಣ ಗಾಂಧಿಗೆ ಜೆಡಿಯು ಬೆಂಬಲ

Srinivas Rao BV
ನವದೆಹಲಿ: ಕಳೆದ ವಾರವಷ್ಟೇ ಮಹಾಮೈತ್ರಿಯಿಂದ ಹೊರಬಂದು ಎನ್ ಡಿಎ ಮೈತ್ರಿಕೂಟ ಸೇರಿದ್ದ ಜೆಡಿಯು ಈಗ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಗೋಪಾಲ್ ಕೃಷ್ಣ ಗಾಂಧಿಗೆ ಬೆಂಬಲ ನೀಡಲು ನಿರ್ಧರಿಸಿದೆ. 
ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯನ್ನು ಬೆಂಬಲಿಸಿದ್ದ ಜೆಡಿಯು ಈಗ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿರುವುದರ ಬಗ್ಗೆ ಜೆಡಿಯು ವಕ್ತಾರ ಕೆಸಿ ತ್ಯಾಗಿ ಪ್ರತಿಕ್ರಿಯೆ ನೀಡಿದ್ದು, ಬಿಹಾರದ ಮಹಾ ಮೈತ್ರಿ ಮುರಿದು ಬೀಳುವ ಸಾಧ್ಯತೆಯನ್ನು ಅಂದಾಜಿನ ನಡುವೆಯೂ ನಾವು ಯುಪಿಎ ಅಭ್ಯರ್ಥಿ ಗೋಪಾಲ್ ಕೃಷ್ಣ ಗಾಂಧಿಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ, ನಮ್ಮ ನಿರ್ಧಾರವನ್ನು ಬಿಜೆಪಿಗೂ ತಿಳಿಸಿದ್ದೇವೆ ಎಂದು ಹೇಳಿದ್ದಾರೆ. 
ಗೋಪಾಲ್ ಕೃಷ್ಣ ಗಾಂಧಿ ಅವರನ್ನು ರಾಷ್ಟ್ರಪತಿ ಹುದ್ದೆಗೆ ಪರಿಗಣಿಸಬೇಕೆಂದು ಬಿಹಾರ ಸಿಎಂ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದರು. ಆದರೆ ಕಾಂಗ್ರೆಸ್ ಮೀರಾ ಕುಮಾರ್ ಅವರನ್ನು ಕಣಕ್ಕಿಳಿಸಿತ್ತು. ಈ ಹಿನ್ನೆಲೆಯಲ್ಲಿ ಜೆಡಿಯು ಎನ್ ಡಿಎ ಅಭ್ಯರ್ಥಿಗೆ ಬೆಂಬಲ ನೀಡಿತ್ತು. ಉಪರಾಷ್ಟ್ರಪತಿ ಚುನಾವಣೆಯನ್ನು ಹೊರತುಪಡಿಸಿ ಉಳಿದೆಲ್ಲಾ ವಿಷಯಗಳಲ್ಲೂ ಸಂಸತ್ ನಲ್ಲಿ ಎನ್ ಡಿಎ ಮೈತ್ರಿಕೂಟವನ್ನು ಬೆಂಬಲಿಸಲು ಸಂಸದರಿಗೆ ಸೂಚನೆ ನೀಡಲಾಗಿದೆ ಎಂದು ತ್ಯಾಗಿ ಹೇಳಿದ್ದಾರೆ. 
SCROLL FOR NEXT