ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ 
ದೇಶ

ಭಯೋತ್ಪಾದನೆಗೆ ಹಣಕಾಸು ನೆರವು: ಗಿಲಾನಿ ದ್ವಿತೀಯ ಪುತ್ರನಿಗೆ ಎನ್ಐಎ ಸಮನ್ಸ್

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸು ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸು ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ದ್ವಿತೀಯ ಪುತ್ರನಿಗೆ ಸಮನ್ಸ್ ಜಾರಿ ಮಾಡಿದೆ. 
ಭಯೋತ್ಪದಾನೆ ಕೃತ್ಯಗಳಿಗೆ ಹಣಕಾಸು ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಗಿಲಾನಿ ಆಪ್ತರ ಮನೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಬಳಿಕ ಗಿಲಾನಿ ದ್ವಿತೀಯ ಪುತ್ರ ನಸೀಮ್ ಗೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ಇನ್ನು ಗಿಲಾನಿ ಹಿರಿಯ ಪುತ್ರ ನಯೀಮ್ ಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಎನ್ಐಎ ಸೂಚಿಸಿತ್ತು. 
ಎನ್ಐಎ ದಾಳಿ ಬಳಿಕ ನಯೀಮ್ ಗಿಲಾನಿ ಎದೆ ನೋವು ಎಂದು ಕಾರಣ ನೀಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಯೀಮ್ಗೆ  ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 
ಪ್ರತ್ಯೇಕತಾವಾದಿ ಗುಂಪುಗಳಿಗೆ ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಹಣ ಸರಬರಾಜು ಮಾಡಲಾಗಿದೆ ಎಂಬ ಆಪಾದನೆಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಎನ್​ಐಎ ಇಂದು ಎರಡನೇ ಬಾರಿ ಕಾಶ್ಮೀರದಲ್ಲಿ ದಾಳಿ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್