ನವದೆಹಲಿ: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗರಿಯಾ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.
ಆಗಸ್ಟ್ 31 ರ ವರೆಗೆ ಕರ್ತವ್ಯ ನಿರ್ವಹಿಸುವುದಾಗಿ ಹೇಳಿರುವ ಅವರು ವಾಪಸ್ ಅಮೆರಿಕಾಗೆ ತೆರಳಿ ಅಲ್ಲಿ ಬೋಧನಾ ವೃತ್ತಿ ಮುಂದುವರಿಸುವುದಾಗಿ ತಿಳಿಸಿದ್ದಾರೆ.
2015ರ ಜನವರಿ 5 ರಂದು ನೀತಿ ಆಯೋಗದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಏಷಿಯನ್ ಡೆವಲಪ್ ಮೆಂಟ್ ಬ್ಯಾಂಕ್ ನಲ್ಲಿ ಮುಖ್ಯ ಆರ್ಥಿಕ ತಜ್ಞರಾಗಿ ಪನಗರಿಯಾ ಈ ಹಿಂದೆ ಕೆಲಸ ಮಾಡಿದ್ದರು.
ಜೊತೆಗೆ ವಿಶ್ವ ಬ್ಯಾಂಕ್, ಹಾಗೂ ವರ್ಲ್ಡ್ ಟ್ರೇಡ್ ಆರ್ಗನೈಸನ್ ಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.