ಲಕ್ನೋ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯನ್ನು ಲಕ್ನೋದಲ್ಲಿ ಭೇಟಿ ಮಾಡಿದ ಅಮೇಥಿ ರೈತರ ನಿಯೋಗ ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ಪರಿಹಾರ ಕೊಡಿಸಬೇಕೆಂದು ಮನವಿ ಸಲ್ಲಿಸಿದೆ.
ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ರೈತರ ಜಮೀನನ್ನು ಸ್ವಾದೀನ ಪಡಿಸಿಕೊಂಡಿದ್ದು, 1 ವರ್ಷದ ಹಿಂದೆ ಎನ್ಎಚ್-56 ಕತೋರಾ ಗ್ರಾಮ್ ಸಬಾದ ಜಗದೀಶ್ ಪುರದಲ್ಲಿ ಕಾಮಗಾರಿ ಆರಂಭವಾಗಿದೆ. ಮೂರು ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪರಿಹಾರ ನೀಡದೇ ರೈತರ ಅಂಗಡಿ, ಮನೆಗಳನ್ನು ತೆರವುಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಭೇಟಿ ಮಾಡಿದ ರಾಹುಲ್ ಗಾಂಧಿ ಸಮಸ್ಯೆಯನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಭೂಮಿ ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ಹಣ ನೀಡುವಂತೆ ಆಗ್ರಹಿಸಿದ್ದಾರೆ.