ಕಾರು ಅಪಘಾತ: ರಾಜಸ್ತಾನ ಸಚಿವರಿಗೆ ಗಂಭೀರ ಗಾಯ, ಸಹಾಯಕ ಸಾವು 
ದೇಶ

ಕಾರು ಅಪಘಾತ: ರಾಜಸ್ತಾನ ಸಚಿವರಿಗೆ ಗಂಭೀರ ಗಾಯ, ಸಹಾಯಕ ಸಾವು

ರಾಜಸ್ತಾನದ ಕೋಟಾ ದಲ್ಲಿ ಕಾರು ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ರಾಜಸ್ತಾನ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಬಾಬೂ ಲಾಲ್ ವರ್ಮಾ ಅವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಸೋಮವಾರ ತಡರಾತ್ರಿ...

ಕೋಟಾ (ರಾಜಸ್ತಾನ): ರಾಜಸ್ತಾನದ ಕೋಟಾ ದಲ್ಲಿ ಕಾರು ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ರಾಜಸ್ತಾನ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಬಾಬೂ ಲಾಲ್ ವರ್ಮಾ ಅವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. 
ರಾಜಸ್ತಾನದ ರಾಷ್ಟ್ರೀಯ ಹೆದ್ದಾರಿ 76ರಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಸಚಿವರ ಬಾಬು ಲಾಲ್ ಅವರ ಕಾರು ಹೋಗುತ್ತಿತ್ತು. ಈ ವೇಳೆ ಎಮ್ಮೆಯೊಂದು ಅಡ್ಡ ಬಂದಿದೆ. ಎಮ್ಮೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಹೋಗಿದ್ದಾನೆ. ಈ ವೇಳೆ ಅಪಘಾತ ಸಂಭವಿಸಿದೆ. 
ಪರಿಣಾಮ ಕಾರಿನಲ್ಲಿದ್ದ ಸಚಿವ ಬಾಬು ಲಾಲ್ ವರ್ಮಾ ಹಾಗೂ ಸಹಾಯಕ ಮೋತಿ ಲಾಲ್ ಅವರಿಗೆ ಗಂಭೀರವಾಗಿ ಗಾಯವಾಗಿದೆ. ಕೂಡಲೇ ಇಬ್ಬರನ್ನೂ ಎಂಬಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಇದೀಗ ಮೋತಿ ಲಾಲ್ ಅವರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 
ಬಾಬು ಲಾಲ್ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್