ನೋಯಿಡಾ: 10ನೇ ತರಗತಿ ವಿದ್ಯಾರ್ಥಿನೊಯೊಬ್ಬಳ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶ ನೋಯಿಡಾದಲ್ಲಿ ನಡೆದಿದೆ.
ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದಕ್ಕಾಗಿ ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲಾಗಿದೆ ಎಂದು ಸೆಕ್ಟರ್ 49 ಪೊಲೀಸ್ ಠಾಣೆಯ ಅಧಿಕಾರಿ ಗಿರೇಂದ್ರ ಪಾಲ್ ಸಿಂಗ್ ಅವರು ತಿಳಿಸಿದ್ದಾರೆ.
ಕಳೆದ ಏಪ್ರಿಲ್ 24ರಿಂದ ತನ್ನ ಮಗಳು ನಾಪತ್ತೆಯಾಗಿರುವುದಾಗಿ ವಿದ್ಯಾರ್ಥಿನಿ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಅಪಹರಣ ಕೇಸ್ ದಾಖಲಿಸಿಕೊಳ್ಳಲಾಗಿತ್ತು. ಆದರೆ ತನಿಖೆಯ ವೇಳೆ ವಿದ್ಯಾರ್ಥಿನಿಯೊಂದಿಗೆ ಹಲವು ಬಾರಿ ಮಾತನಾಡಿದ್ದ ಯಶವೀರ್ ಎಂಬಾತ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ ಅದಕ್ಕೆ ವಿರೋಧ ವಕ್ತಪಡಿಸಿದ್ದರಿಂದ ಹೊಡೆದು ಸಾಯಿಸಿದ್ದಾನೆ ಎಂದು ಗಿರೇಂದ್ರ ಸಿಂಗ್ ಅವರು ಹೇಳಿದ್ದಾರೆ.
ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ವಿದ್ಯಾರ್ಥಿನಿಯನ್ನು ತನ್ನ ಗ್ರಾಮಕ್ಕೆ ಕರೆದುಕೊಂಡು ಹೋಗಿದ್ದ ಯಶವೀರ್ ಮೇ 2ರಂದು ಆಕೆಯ ಮೇಲೆ ಬಲವಂತವಾಗಿ ಅಚ್ಯಾಚಾರ ಮಾಡಲು ಯತ್ನಿಸಿದ್ದಾನೆ. ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಹತ್ಯೆ ಮಾಡಿ ವಿದ್ಯಾರ್ಥಿನಿಯ ಮೃತದೇಹವನ್ನು ಸಿಂಬೋಲಿ ಪ್ರದೇಶದಲ್ಲಿ ಬಿಸಾಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿ ಠಾಣಾಧಿಕಾರಿ ಹೇಳಿದ್ದಾರೆ.