ಗಾಯತ್ರಿ ಪ್ರಜಾಪತಿ 
ದೇಶ

ಮಾಜಿ ಸಚಿವ ಗಾಯತ್ರಿ ಪ್ರಜಾಪತಿ, ಇತರೆ 6 ಮಂದಿ ವಿರುದ್ಧ ಚಾರ್ಜ್ ಶೀಟ್ ದಾಖಲು

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಸಮಾಜವಾದಿ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿ ಹಾಗೂ ಇತರೆ ಆರು...

ಲಖನೌ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಸಮಾಜವಾದಿ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿ ಹಾಗೂ ಇತರೆ ಆರು ಮಂದಿ ವಿರುದ್ಧ ಲಖನೌ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದಾರೆ.
ಗಾಯತ್ರಿ ಪ್ರಜಾಪತಿ ಹಾಗೂ ಇತರೆ ಆರು ಮಂದಿ ವಿರುದ್ಧ ನಿನ್ನೆ ಸ್ಥಳೀಯ ಕೋರ್ಟ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಸಿರುವುದಾಗಿ ಶನಿವಾರ ವಿಶೇಷ ತನಿಖಾ ತಂಡದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚಿತ್ರಕೂಟ್ ಮೂಲದ ಮಹಿಳಾ ಕಾರ್ಪೋರೇಟರ್ ಒಬ್ಬರು ಗಾಯತ್ರಿ ಪ್ರಜಾಪತಿ ಹಾಗೂ ಅವರ ಆಪ್ತರು ತನ್ನ ಮೇಲೆ ಅತ್ಯಾಚಾರ ಎಸಗಿ ತನ್ನ ಅಪ್ರಾಪ್ತ ಮಗಳಿಗೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 2014ರಲ್ಲಿ ಕೇಸ್ ದಾಖಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಳೆದ ಫೆಬ್ರವರಿಯಲ್ಲಿ ಲಖನೌ ಪೊಲೀಸರು ಪ್ರಜಾಪತಿ ಹಾಗೂ ಇತರೆ ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಗಾಯತ್ರಿ ಪ್ರಜಾಪತಿಯನ್ನು ಸುಮಾರು ಒಂದು ತಿಂಗಳ ನಂತರ ಮಾರ್ಚ್ 15ರಂದು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಇತರೆ ಆರೋಪಿಗಳನ್ನು ಸಹ ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT