ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯ ತಟ್ಟ ಪಾನಿ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಭಾರತೀಯ ಸೇನೆಯ ವಿರುದ್ಧ ಪ್ರತಿದಾಳಿ ನಡೆಸುವ ಮೂಲಕ ಐವರು ಭಾರತೀಯ ಯೋಧರನ್ನು ಹತ್ಯೆ ಮಾಡಿರುವುದಾಗಿ ಶನಿವಾರ ಪಾಕಿಸ್ತಾನ ಸೇನೆ ಹೇಳಿಕೊಂಡಿದೆ.
ಭಾರತದ ಅಪ್ರಚೋದಿತ ದಾಳಿ ಪಾಕಿಸ್ತಾನ ತಕ್ಕ ಉತ್ತರ ನೀಡಿದ್ದು, ಐವರು ಯೋಧರನ್ನು ಹತ್ಯೆ ಮಾಡಲಾಗಿದೆ ಮತ್ತು ಭಾರತೀಯ ಬಂಕರ್ ಅನ್ನು ಧ್ವಂಸಗೊಳಿಸಲಾಗಿದೆ ಎಂದು ಪಾಕ್ ಸೇನಾ ವಕ್ತಾರ ಮೇಜರ್ ಜನರಲ್ ಆಸಿಫ್ ಗಫೂರ್ ಅವರು ಟ್ವೀಟ್ ಮಾಡಿದ್ದಾರೆ.
ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಯಾವುದೇ ಹೆಚ್ಚಿನ ಮಾಹಿತಿ ನೀಡಿಲ್ಲ. ಆದರೆ ಇದಕ್ಕು ಮುನ್ನ ಭಾರತ ಎಲ್ ಒಸಿಯ ಪೂಂಚ್ ಸೆಕ್ಟರ್ ನಲ್ಲಿ ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಮಹಿಳೆ ಗಾಯಗೊಂಡಿರುವುದಾಗಿ ಹೇಳಿತ್ತು.