ಬದೌನ್: ಟ್ರ್ಯಾಕ್ಟರ್ ವೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು 15 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬದೌನ್ ನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಅಪಘಾತ ಸಂಭವಿಸಿದೆ, ಗ್ರಾಮಸ್ಥರು ಸಮಾರಂಭ ಮುಗಿಸಿ ವಾಪಸ್ ಬರುವಾಗ ಈ ದುರಂತ ನಡೆದಿದೆ.
15 ಮಂದಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.