ಕುಂತಿ: ಜಾರ್ಖಂಡ್ ನ ಕುಂತಿಯ ಜಿಲ್ಲೆಯ ಬಿಚ್ಲಾ ಗ್ರಾಮದ ಬಳಿ ಬಸ್ ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಇಂದು ಬೆಳಗ್ಗೆ 11ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ರಾಂಚಿಯಿಂದ ಸಿಮ್ದೆಗಾಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎಂದು ಕುಂತಿ ಉಪ ವಿಭಾಗೀಯ ಅಧಿಕಾರಿ ಪ್ರಣವ್ ಪಾಲ್ ಅವರು ಹೇಳಿದ್ದಾರೆ.
ಬಸ್ ಚಾಲಕ ಚರ್ಕು ಗೋಪೆ ಅವರು ಬಸ್ಸನ್ನು ಬೇರೆಯವರಿಗೆ ಚಾಲನೆ ಮಾಡಲು ನೀಡಿ, ತಾನು ಪ್ರಯಾಣಿಕರಿಂದ ಹಣ ಪಡೆದು ಟಿಕೆಟ್ ನೀಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಪಾಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics