ದೇಶ

ಇಸಿಸ್ ನಂಟು: ಸೂರತ್'ನಲ್ಲಿ ಶಂಕಿತ ವ್ಯಕ್ತಿ ಬಂಧನ

Manjula VN
ನವದೆಹಲಿ: ಇಸಿಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಶಂಕೆ ಮೇರೆಗೆ ಸೂರತ್ ನಲ್ಲಿ ಶಂಕಿತ ವ್ಯಕ್ತಿಯೊಬ್ಬನನ್ನು ಗುಜರಾತ್ ಉಗ್ರ ನಿಗ್ರಹ ಪಡೆಯ ಅಧಿಕಾರಿಗಳು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ. 
ಬಂಧಿತನಾಗಿರುವ ಶಂಕಿತ ವ್ಯಕ್ತಿ ಉಗ್ರ ಸಂಘಟನೆಯೊಂದಿಗೆ ಕೈಜೋಡಿಸಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಅಧಿಕಾರಿಗಳು ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿದ್ದಾರೆ. 
ಪ್ರಸ್ತುತ ಶಂಕಿತ ವ್ಯಕ್ತಿ ಫೋನ್ ಕರೆಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಉಗ್ರ ಸಂಘಟನೆಯೊಂದಿಗೆ ನಂಟು ಹಾಗೂ ಹವಾಲಾ ದಂಧೆಯಲ್ಲಿ ಭಾಗಿಯಾಗಿರುವ ಕುರಿತಂತೆ ತನಿಖೆ ನಡೆಸುತ್ತಿದ್ದಾರೆ. 
ಬಂಧಿತ ವ್ಯಕ್ತಿ ಬೇಹುಗಾರಿಕೆ ಚಟುವಟಿಕೆ ನಡೆಸುತ್ತಿದ್ದಾನೆಯೇ ಅಥವಾ ಉಗ್ರ ಸಂಘಟನೆಯೊಂದಿಗೆ ವ್ಯವಹಾರ ನಡೆಸುತ್ತಿದ್ದನೆಯೇ ಎಂಬುದರ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಬಂಧಿತ ಶಂಕಿತ ವ್ಯಕ್ತಿ ರಾಜ್'ಕೋಟ್ ನಿವಾಸಿಯಾಗಿದ್ದು, ದಕ್ಷಿಣ ಮುಂಬೈನಲ್ಲಿ ನೆಲೆಯೂರಿದ್ದ. ಕೆಲ ದಿನಗಳ ಹಿಂದಷ್ಟೇ ಲಖನೌನಲ್ಲಿ ಉತ್ತರಪ್ರದೇಶ ಎಟಿಎಸ್ ಅಧಿಕಾರಿಗಳು ಅಫ್ತಾಬ್ ಅಲಿ ಎಂಬ ಶಂಕಿತ ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿದ್ದರು. ಈತ ನೀಡಿದ ಮಾಹಿತಿ ಮೇರೆಗೆ ಇದೀಗ ಸೂರತ್ ನಲ್ಲಿ ವ್ಯಕ್ತಿಯೊಬ್ಬನನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ. 
ಪ್ರಸ್ತುತ ಬಂಧನಕ್ಕೊಳಗಾಗಿರುವ ವ್ಯಕ್ತಿ ಉಗ್ರ ಸಂಘಟನೆಗಳ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡುತ್ತಿದ್ದ ಎಂಬ ಮಾಹಿತಿಗಳು ಕೇಳಿಬಂದಿತ್ತು. ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
SCROLL FOR NEXT