ಆಹಾರ ಇಲಾಖೆ ಆಯುಕ್ತ ಅನುರಾಗ್ ತಿವಾರಿ
ನವದೆಹಲಿ: ಉತ್ತರ ಪ್ರದೇಶದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಆಹಾರ ಇಲಾಖೆ ಆಯುಕ್ತ ಅನುರಾಗ್ ತಿವಾರಿಯವರು ತಮ್ಮ ಕೆಲಸದ ಮೇಲೆ ಅತೃಪ್ತಿಯನ್ನು ಹೊಂದಿದ್ದರು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ.
ತಿವಾರಿ ಸಾವು ಪ್ರಕರಣ ಸಂಬಂಧ ವಿಶೇಷ ತನಿಖಾ ದಳ (ಎಸ್ಐಟಿ) ತನಿಖೆ ನಡೆಸುತ್ತಿದ್ದು, ಈಗಾಗಲೇ ತಿವಾರಿಯವರು ಬಳಸುತ್ತಿದ್ದ 2 ಲ್ಯಾಪ್ ಟಾಪ್ ಗಳನ್ನು ಕೇಂದ್ರ ಕೇಂದ್ರ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದೆ. ಅಲ್ಲದೆ, ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಅನುರಾಗ್ ಅವರಿಗೆ ಸಂಬಂಧಿಸಿದ ಕೆಲ ಪೇಪರ್ಸ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಅನುರಾಗ್ ಅವರು ಬ್ರಾಂಕೈಟಿಸ್ (ಗಂಟಲೂತ, ಶ್ವಾಸನಾಳದ ರೋಗ) ರೋಗದಿಂದ ಬಳಲುತ್ತಿರುವುದು ಈ ವೇಳೆ ತಿಳಿದುಬಂದಿದೆ. ಅಲ್ಲದೆ, ಬೆಂಗಳೂರಿನಲ್ಲಿ ಕೆಲಸ ಮಾಡಲು ಅತೃಪ್ತಿಗೊಂಡಿದ್ದ ಅನುರಾಗ್ ತಿವಾರಿಯವರು, ಕರ್ನಾಟಕ ಕ್ಯಾಡರ್ ಗೆ ಸ್ಥಳಾಂತರಗೊಳ್ಳಲು ಬಯಸಿದ್ದರು ಎಂಬ ಸತ್ಯ ವಿಚಾರಣೆ ವೇಳೆ ಬಹಿರಂಗಗೊಂಡಿದೆ.
ಕರ್ನಾಟಕ-ಕೇಡರ್ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಲಖನೌದಲ್ಲಿ ಕೆಲ ದಿನಗಳ ಹಿಂದಷ್ಟೇ ಮೀರಾ ಬಾಯ್ ಅತಿಥಿ ಗೃಹದ ಸಮೀಪ ರಸ್ತೆ ಬದಿಯಲ್ಲಿ ಶವವಾಗಿ ಸಿಕ್ಕಿದ್ದರು.