ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ನವದೆಹಲಿ: ಕಾಶ್ಮೀರ ಭಾರತದ ಶಕ್ತಿಯಾಗಿದ್ದು, ಅದನ್ನು ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ.
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಸೀಮಿತ ದಾಳಿ ನಡೆಸಿದ ಬಳಿಕ ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಶೇ.45 ರಷ್ಟು ಕಡಿಮೆಯಾಗಿದೆ ಎಂದು ಹೇಳಿದ್ದರು.
ಈ ಹೇಳಿಕೆಗೆ ಇಂದು ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಕಾಶ್ಮೀರದಲ್ಲಿ ಹಿಂಸಾಚಾರ ಹತ್ತಿಕ್ಕಲು ಬಿಜೆಪಿ-ಪಿಡಿಸಿ ಸರ್ಕಾರ ವಿಫಲವಾಗಿದೆ. ಕಾಶ್ಮೀರ ಭಾರತದ ಶಕ್ತಿಯಾಗಿದ್ದು, ಇದನ್ನೇ ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದೆ ಎಂದಿದ್ದಾರೆ.
6-7 ತಿಂಗಳ ಹಿಂದಷ್ಟೇ ರಕ್ಷಣಾ ಸಚಿವ ಅರುಣ್ ಜೇಟ್ಲಿಯವರು ನನ್ನನ್ನು ಭೇಟಿಯಾಗಲು ಬಂದಿದ್ದರು. ಕಾಶ್ಮೀರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದ್ದು, ಕಾಶ್ಮೀರ ಹೊತ್ತು ಉರಿಯಲಿದೆ ಎಂದು ಆಗಲೇ ಹೇಳಿದ್ದೆ. ನನ್ನ ಹೇಳಿಕೆಯನ್ನು ಬದಿಗೊತ್ತಿದ ಜೇಟ್ಲಿಯವರು ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ ಎಂದು ಹೇಳಿದ್ದರು.
ಕೇಂದ್ರ ತನ್ನ ವೈಫಲ್ಯಗಳಿಂದ ದೇಶದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ. ಕಾಶ್ಮೀರದವನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.