ತಿರುವನಂತಪುರ: ಎಡ ಪಕ್ಷಗಳಿಂದ ಹಿಂಸಾಚಾರ ಹಿಂಸಾಚಾರ ಹೆಚ್ಚಿದಷ್ಟು ಕೇರಳದಲ್ಲಿ ಮತ್ತಷ್ಟು ಕಮಲ ಗಳು ಅರಳುತ್ತವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಪಕ್ಷ ಬಲಪಡಿಸುವ ಸಂಬಂಧ ಕೇರಳ ಪ್ರವಾಸದಲ್ಲಿರುವ ಅಮಿತ್ ಶಾ ಆರ್ ಎಸ್ ಎಸ್ ಮುಖಂಡರು ಮತ್ತು ಪಕ್ಷದ ಪದಾಧಿಕಾರಿಗಳ ಜೊತೆ ಸಭೆ ನಡೆಸಿದರು.
ಮುಖ್ಯಮಂತ್ರಿ ತವರು ಕ್ಷೇತ್ರವಾದ ಕಣ್ಣೂರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಪಿಣರಾಯಿ ವಿಫಲರಾಗಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ.
ಕೇರಳದಲ್ಲಿ ಸಿಪಿಎಂ ನೇತೃತ್ವದ ಎಲ್ ಡಿಎಫ್ ಸರ್ಕಾರದ ಅವಧಿಯಲ್ಲಿ 13 ಆರ್ ಎಸ್ ಎಸ್ -ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ ಎಂದು ಆಪಾದಿಸಿದರು. ಹಿಂಸಾಚಾರದ ಮೂಲಕ ರಾಜ್ಯದಲ್ಲಿ ಬಿಜೆಪಿ ಪ್ರಗತಿಯನ್ನು ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.