ಲಂಡನ್'ನಲ್ಲಿ ಉಗ್ರರ ದಾಳಿ: ಪ್ರಧಾನಿ ಮೋದಿ ತೀವ್ರ ಖಂಡನೆ
ಲಂಡನ್'ನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ...
ನವದೆಹಲಿ: ಲಂಡನ್'ನಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ದಾಳಿ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಲಂಡನ್ ನಲ್ಲಿ ನಡೆದ ಉಗ್ರರ ದಾಳಿ ಆಘಾತ ಹಾಗೂ ದುಃಖವನ್ನು ತಂದಿದೆ. ದಾಳಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಮೃತರ ಕುಟುಂಬಕ್ಕೆ ಸಂತಾಪವನ್ನು ಸೂಚಿಸುತ್ತೇವೆ, ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆಂದು ತಿಳಿಸಿದ್ದಾರೆ.
ಲಂಡನ್ ನ ಎರಡು ಪ್ರತಿಷ್ಟಿತ ಪ್ರದೇಶಗಳಲ್ಲಿ ಏಕಕಾಲದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.