ಟಿಟಿವಿ ದಿನಕರನ್ 
ದೇಶ

ಬೆಂಗಳೂರು: ಜೈಲಿನಲ್ಲಿ ಶಶಿಕಲಾ ಭೇಟಿ ಮಾಡಿದ ದಿನಕರನ್

ಎಐಎಡಿಎಂಕೆ ಪಕ್ಷದಿಂದ ವಜಾಗೊಂಡ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಇಂದು ಪಕ್ಷದ...

ಬೆಂಗಳೂರು: ಎಐಎಡಿಎಂಕೆ ಪಕ್ಷದಿಂದ ವಜಾಗೊಂಡಿದ್ದ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಇಂದು ಪಕ್ಷದ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿದರು. 
ಪಕ್ಷದ ಎರಡು ಎಲೆಯ ಚಿಹ್ನೆಗಾಗಿ ಚುನಾವಣಾ ಆಯೋಗ ಅಧಿಕಾರಿಗಳಿಗೆ ಲಂಚ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಕೋರ್ಟ್ ಕಳೆದ ಗುರುವಾರ ದಿನಕರನ್ ಗೆ ಜಾಮೀನು ನೀಡಿತ್ತು. ಶಶಿಕಲಾ, ತನ್ನ ಅಳಿಯ ದಿನಕರನ್ ರನ್ನು ಪಕ್ಷದ ಉಪ ಪ್ರಧಾನ ಕಾರ್ಯದರ್ಶಿಯಾಗಿ ಜೈಲಿಗೆ ಹೋಗುವ ಮುನ್ನ ನೇಮಕ ಮಾಡಿದ್ದರು.
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ವಿ.ಕೆ.ಶಶಿಕಲಾ ಕಳೆದ ಫೆಬ್ರವರಿಯಲ್ಲಿ ಜೈಲು ಸೇರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!