ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ 
ದೇಶ

ಸಂವಿಧಾನವನ್ನು ರಕ್ಷಿಸುವ ರಾಷ್ಟ್ರಪತಿ ದೇಶಕ್ಕೆ ಬೇಕಾಗಿದೆ: ಸೋನಿಯಾ

ರಾಷ್ಟ್ರಪತಿ ಚುನಾವಣೆ ಸನಿಹವಾಗುತ್ತಿದ್ದು, ಸಂವಿಧಾನವನ್ನು ರಕ್ಷಿಸುವ ವ್ಯಕ್ತಿಯನ್ನು ಈ ಅತ್ಯುನ್ನತ ಹುದ್ದೆಗೆ ಆಯ್ಕೆ ಮಾಡುವ ಅವಶ್ಯಕತೆ ಇದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ

ನವದೆಹಲಿ: ರಾಷ್ಟ್ರಪತಿ ಚುನಾವಣೆ ಸನಿಹವಾಗುತ್ತಿದ್ದು, ಸಂವಿಧಾನವನ್ನು ರಕ್ಷಿಸುವ ವ್ಯಕ್ತಿಯನ್ನು ಈ ಅತ್ಯುನ್ನತ ಹುದ್ದೆಗೆ ಆಯ್ಕೆ ಮಾಡುವ ಅವಶ್ಯಕತೆ ಇದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಹೇಳಿದ್ದಾರೆ. 
"ನಮ್ಮ ಗಣರಾಜ್ಯದ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಯನ್ನು ಇನ್ನು ಕೆಲವೇ ವಾರಗಳಲ್ಲಿ ಆಯ್ಕೆ ಮಾಡಲಿದ್ದೇವೆ. ಇಂತಹ ದಿನಗಳಲ್ಲಿ, ಈ ಅತ್ಯುನ್ನತ ಹುದ್ದೆಗೆ ಆಯ್ಕೆಯಾಗುವವರು ಸಂವಿಧಾನವನ್ನು ರಕ್ಷಿಸುವ ಅಗತ್ಯ ಹೆಚ್ಚಾಗಿದೆ" ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಗಾಂಧಿ ಹೇಳಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ರಾಹುಲ್ ಗಾಂಧಿ ಮತ್ತಿತರ ಸಹೋದ್ಯೋಗಿಗಳು ಸಮಾನ ಮನಸ್ಕ ಪಕ್ಷಗಳ ಮುಖಂಡರನ್ನು ಭೇಟಿ ಮಾಡಿ ಈ ಅತ್ಯುನ್ನತ ಹುದ್ದೆಯ ಚುನಾವಣೆಗೆ ಎಲ್ಲರಿಗು ಒಪ್ಪಿಗೆಯಾಗುವ ಮುಖಂಡನನ್ನು ಆಯ್ಕೆ ಮಾಡುವುದರ ಬಗ್ಗೆ ಚರ್ಚಿಸಿದ್ದಾರೆ ಎಂದು ಗಾಂಧಿ ಹೇಳಿದ್ದಾರೆ. 
ಇದನ್ನು ಮುಂದಕ್ಕೆ ಕೊಂಡೊಯ್ಯಲು ಪ್ರತಿನಿಧಿಗಳನ್ನು ಒಳಗೊಂಡ ಒಂದು ಸಣ್ಣ ಸಮಿತಿ ರಚಿಸಲಾಗಿದೆ ಎಂದು ಕೂಡ ಅವರು ಹೇಳಿದ್ದಾರೆ. 
ಮುಂದಿನ ಲೋಕಸಭಾ ಚುನಾವಣೆಯ ಬಗ್ಗೆಯೂ ಅವರು ಮಾತನಾಡಿದ್ದು "೨೦೧೯ರ ಚುನಾವಣೆಯಿಂದ ನಾವು ದೂರವಿಲ್ಲ. ಭಾರತದ ಪರಿಕಲ್ಪನೆಯನ್ನು ಉಳಿಸಲು ನಾವು ಸದಾ ಸಿದ್ಧವಾಗಿರಬೇಕು. ಇದನ್ನು ಕೊನೆಗಾಣಿಸಲು ಸದ್ಯದ ಸರ್ಕಾರ ಪ್ರಯತ್ನಿಸುತ್ತಿದೆ" ಎಂದು ಕೂಡ ಅವರು ಹೇಳಿದ್ದಾರೆ. 
ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ವಿಧಾನಸಭಾ ಚುನಾವಣೆಗಳು ಪಕ್ಷಕ್ಕೆ ಒಳ್ಳೆಯ ಪಾಠ ಕಲಿಸಿವೆ ಎಂದಿರುವ ಸೋನಿಯಾ "ಕ್ರಿಯಾಶೀಲ ಕಾರ್ಯಕರ್ತರು ಮತ್ತು ಪರಿಣಾಮಕಾರಿ ನಾಯಕತ್ವದಿಂದ ಪಂಜಾಬ್ ನಲ್ಲಿ ಎನ್ ಡಿ ಎ ಸರ್ಕಾರವನ್ನು ಸೋಲಿಸಲು ನಮಗೆ ಸಾಧ್ಯವಾಯಿತು, ಮಣಿಪುರ ಮತ್ತು ಗೋವಾದಲ್ಲಿ ಸರ್ಕಾರ ರಚಿಸುವ ಅವಕಾಶವನ್ನು ಅಲ್ಪ ಸಂಖ್ಯೆಯಲ್ಲಿ ಕಳೆದುಕೊಂಡೆವು. ಮತ್ತು ಇದು ತಿಳಿಸುವುದೇನೆಂದರೆ ಬಿಜೆಪಿ ತನ್ನ ಅಪಾರ ಸಂಪನ್ಮೂಲಗಳನ್ನು ಬಳಸಿ ಅಧಿಕಾರ ಚಲಾಯಿಸಿ ನಮ್ಮಿಂದ ಜನಾದೇಶವನ್ನು ಕಿತ್ತುಕೊಳ್ಳಲು ಪ್ರಯತ್ನಿಸುತ್ತುದೆ, ಈ ಹಿಂದೆ ಉತ್ತರಾಖಂಡದಲ್ಲಿ ಮತ್ತು ಈಗ ಅರುಣಾಚಲ ಪ್ರದೇಶದಲ್ಲಿ ಮಾಡಿದಂತೆ. ಇದು ಮತ್ತೆ ನಡೆಯದಂತೆ ತಡೆಯಬೇಕು" ಎಂದು ಕೂಡ ಗಾಂಧಿ ಹೇಳಿದ್ದಾರೆ. 
ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕಿದೆ ಎಂದು ಕೂಡ ಕರೆಕೊಟ್ಟಿದ್ದಾರೆ ಗಾಂಧಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!