ದೇಶ

ಸೋನಿಯಾ ನೇತೃತ್ವದಲ್ಲಿ ಸಿಡಬ್ಲ್ಯೂಸಿ ಸಭೆ: ರಾಹುಲ್ ಪದೋನ್ನತಿ ಬಗ್ಗೆ ಚರ್ಚೆ ಸಾಧ್ಯತೆ

Srinivas Rao BV
ನವದೆಹಲಿ: ಜೂ.6 ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆ ನಡೆಯಲಿದ್ದು, ರಾಹುಲ್ ಗಾಂಧಿ ಪದೋನ್ನತಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸದಲ್ಲಿಯೇ ಸಭೆ ನಡೆಯಲಿದ್ದು, ಪಕ್ಷದಲ್ಲಿ ಆಂತರಿಕ ಚುನಾವಣೆ ನಡೆಯುವುದಿದ್ದು, ವರ್ಷಾಂತ್ಯಕ್ಕೆ ಈ ಚುನಾವಣೆ ಪೂರ್ಣಗೊಳಿಸುವುದರ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಸಧ್ಯದಲ್ಲೇ ರಾಷ್ಟ್ರಪತಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಿಡಬ್ಲ್ಯೂ ಸಿ ಸಭೆ ಮಹತ್ವ ಪಡೆದುಕೊಂಡಿದ್ದು, ಪ್ರತಿಪಕ್ಷಗಳನ್ನು ಒಗ್ಗೂಡಿಸುವುದರ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಿದೆ. 
7 ತಿಂಗಳ ಹಿಂದೆ ನಡೆದಿದ್ದ ಸಿಡಬ್ಲ್ಯೂಸಿ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ನ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. 
SCROLL FOR NEXT