ದೇಶ

ಮಧ್ಯಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 21 ಮಂದಿ ಸಜೀವ ದಹನ

Lingaraj Badiger
ಬಲಘಾಟ್: ಮಧ್ಯಪ್ರದೇಶದ ಬಲಘಾಟ್ ಜಿಲ್ಲೆಯಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಬುಧವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 21 ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ ಮತ್ತು 14ಕ್ಕು ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಜಿಲ್ಲಾ ಕೇಂದ್ರದಿಂದ ಸುಮಾರು 10 ಕಿ.ಮೀ.ದೂರದಲ್ಲಿರುವ ಕೋಟ್ವಲಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು, ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ, ಪಟಾಕಿಗಳ ದಾಸ್ತಾನು ಇರಿಸಿದ್ದ ಸ್ಥಳದಲ್ಲಿ ಯಾರೋ ಬೀಡಿ ಸೇದಿ ಎಸೆದು ಹೋಗಿದು ಅಗ್ನಿ ದುರಂತಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡವರಲ್ಲಿ ಕೆಲವರು ಕಾರ್ಖಾನೆ ಅಧಿಕಾರಿಗಳು ಸಹ ಸೇರಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಇದುವರೆ 8 ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಜಿಲ್ಲಾಧಿಕಾರಿ ಭರತ್ ಯಾದವ್ ಅವರು ಪಿಟಿಐಗೆ ತಿಳಿಸಿದ್ದಾರೆ. ಅಲ್ಲದೆ ಇನ್ನು ಹಲವರು ಕಾರ್ಖಾನೆ ಒಳಗೆ ಸಿಲುಕಿರುವ ಸಾಧ್ಯತೆ ಇದೆ ಎಂದಿದ್ದಾರೆ.
ಈ ಪಟಾಕಿ ಕಾರ್ಖಾನೆ ವಾರಿಶ್ ಅಹ್ಮದ್ ಎಂಬುವವರಿಗೆ ಸೇರಿದ್ದು ಎಂದು ಯಾದವ್ ಅವರು ತಿಳಿಸಿದ್ದಾರೆ.
SCROLL FOR NEXT