ಮೋನ್: ನಾಗಾಲ್ಯಾಂಡ್'ನ ಮೋನ್ ನಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಸದೆಬಡಿದಿದೆ ಎಂದು ಬುಧವಾರ ತಿಳಿದುಬಂದಿದೆ.
ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ತಿಳಿದುಬಂದ ಹಿನ್ನಲೆಯಲ್ಲಿ ಸೇನಾ ಪಡೆ ತನ್ನ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಸೇನೆ ಕಾರ್ಯಾಚರಣೆಗಿಳಿಯುತ್ತಿದ್ದಂತೆಯೇ ಉಗ್ರರು ಸೇನಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ಸೇನಾಧಿಕಾರಿ ಹುತಾತ್ಮರಾಗಿದ್ದು, ಮತ್ತೋರ್ವ ನಾಗರಿಕ ಸಾವನ್ನಪ್ಪಿದ್ದಾನೆಂದು ವರದಿಗಳು ತಿಳಿಸಿವೆ.
ಉಗ್ರರು ಗುಂಡಿನ ದಾಳಿ ನಡೆಸುತ್ತಿದ್ದಂತೆಯೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾ ಪಡೆ ಅಡಗಿ ಕುಳಿತಿದ್ದ ಮೂವರು ಉಗ್ರರನ್ನು ಸದೆಬಡಿದಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.