ನವದೆಹಲಿ: ಬೆಳೆದ ಬೆಳೆಗೆ ಸೂಕ್ತ ಬೆಲೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗೋಲಿಬಾರ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಮಾಹಿತಿ ನೀಡಿದ್ದಾರೆ.
ಮಂಡಸೋರ್ ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಅಮಿತ್ ಶಾ ಅವರಿಗೆ ಶಿವರಾಜ್ ಸಿಂಗ್ ಚೌಹಾಣ್ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಶಾಂತಿ ಕಾಪಾಡಬೇಕೆಂದು ಮಧ್ಯಪ್ರದೇಶ ಸಿಎಂ ರೈತರಿಗೆ ಮನವಿ ಮಾಡಿದ್ದು, ಮೃತ ರೈತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ಪ್ರಕರಣದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಶಿವರಾಜ್ ಸಿಂಗ್ ಚೌಹಾಣ್, ಸರ್ಕಾರ ರೈತರ ಬೆನ್ನಿಗಿದೆ. ಈ ಹಿಂದೆಯೂ ರೈತರ ಹಲವು ಬೇಡಿಕೆಗಳನ್ನು ಈಡೇರಿಸಿದ್ದೇವೆ, ರೈತರು ಶಾಂತಿ ಕಾಪಾಡಬೇಕೆಂದು ಹೇಳಿದ್ದು, ಗೋಲಿಬಾರ್ ಪ್ರಕರಣದ ಬಗ್ಗೆ ಶಿವರಾಜ್ ಸಿಂಗ್ ಚೌಹಾಣ್ ತನಿಖೆಗೆ ಆದೇಶಿಸಿದ್ದಾರೆ.