ಬಾಬಾ ರಾಮ್ ದೇವ್, ಯೋಗಿ ಆದಿತ್ಯನಾಥ್ ಯೋಗ ಪ್ರದರ್ಶನ
ಲಖನೌ: ಜೂ.21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇದಕ್ಕೂ ಮುನ್ನ ಉತ್ತರ ಪ್ರದೇಶದಲ್ಲಿ ಯೋಗ ಗುರು ಬಾಬಾ ರಾಮ್ ದೇವ್ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಯೋಗ ಪ್ರದರ್ಶನ ಮಾಡಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ತಾಲೀಮಿನಲ್ಲಿ ಬಾಬಾ ರಾಮ್ ದೇವ್, ಯೋಗಿ ಆದಿತ್ಯನಾಥ್ ಹಾಗೂ ಉತ್ತರ ಪ್ರದೇಶ ರಾಜ್ಯಪಾಲ ರಾಮ್ ನಾಯ್ಕ್ ಭಾಗಿಯಾಗಿದ್ದು, ಯೋಗಾಭ್ಯಾಸವನ್ನು ಪ್ರದರ್ಶಿಸಿದ್ದಾರೆ.
ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಲಖನೌ ನಲ್ಲಿ ಜೂ.21 ರ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಿದ್ದಾರೆ ಎಂದು ತಿಳಿದುಬಂದಿದೆ. 50,000 ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದ್ದು, ರಾಜ್ಯ ಸರ್ಕಾರದ ಕಾರ್ಯದರ್ಶಿ ರಾಹುಲ್ ಭಟ್ನಾಗರ್ ಆಯುಷ್ ಇಲಾಖೆಯ ಕಾರ್ಯದರ್ಶಿ ಹಾಗೂ ಇತರ ಅಧಿಕಾರಿಗಳು ಯೋಗ ದಿನಾಚರಣೆ ನಡೆಸುವುದರ ಬಗ್ಗೆ ಪೂರ್ವಭಾವಿ ಸಭೆ ನಡೆಸಿದ್ದಾರೆ. ಯೋಗ ದಿನಾಚರಣೆಯಲ್ಲಿ ಭಾಗಿಯಾಗುವ ಜನರಿಗೆ ಮಿನರಲ್ ವಾಟರ್ ಹಾಗೂ ಟಿ-ಶರ್ಟ್ ಗಳನ್ನು ವಿತರಣೆ ಮಾಡಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics