ಜೈಪುರ: ಮಧ್ಯಪ್ರದೇಶದಲ್ಲಿ ರೈತರು ಪ್ರತಿಭಟನೆಯಲ್ಲಿ ನಿರತರಾಗಿರುವುದರ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರೈತರ ಆದಾಯ ದ್ವಿಗುಣಗೊಳ್ಳುವುದಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಭಾರತ ಸರ್ಕಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ರಾಜಸ್ಥಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, 2020 ರ ವೇಳೆಗೆ ರೈತರ ಆದಾಯ ಎರಡು ಪಟ್ಟು ಹೆಚ್ಚಾಗುವಂತೆ ಮಾಡಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಭಾರತದ ರೈತರ ಸಂವೃದ್ಧಿಯಾಗದೇ ಭಾರತ ಸಂವೃದ್ಧಿಯಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೈತರ ಆದಾಯವನ್ನು ಮುಂದಿನ ಮೂರು ವರ್ಷಗಳಲ್ಲಿ ದ್ವಿಗುಣಗೊಳ್ಳುವಂತೆ ಮಾಡುವುದಕ್ಕೆ ಕ್ರಮ ಕೈಗೊಂಡಿದೆ ಎಂದಿದ್ದಾರೆ.