ನೌಗಾಮ್ ಎನ್'ಕೌಂಟರ್: ಉಗ್ರರು ಬಳಸಿದ್ದ ಶಸ್ತ್ರಾಸ್ತ್ರಗಳು, ಔಷಧಿಗಳ ಮೇಲೆ ಪಾಕ್ ಗುರುತು ಪತ್ತೆ 
ದೇಶ

ನೌಗಾಮ್ ಎನ್'ಕೌಂಟರ್: ಉಗ್ರರು ಬಳಸಿದ್ದ ಶಸ್ತ್ರಾಸ್ತ್ರಗಳು, ಔಷಧಿಗಳ ಮೇಲೆ ಪಾಕ್ ಗುರುತು ಪತ್ತೆ

ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಬಳಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ ಬಳಿಕ ವಶಕ್ಕೆ ಪಡೆದುಕೊಳ್ಳಲಾದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಔಷಧಿಗಳ ಮೇಲೆ ಪಾಕಿಸ್ತಾನದ ಗುರುತುಗಳಿರುವುದು ಪತ್ತೆಯಾಗಿದೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಬಳಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ ಬಳಿಕ ವಶಕ್ಕೆ ಪಡೆದುಕೊಳ್ಳಲಾದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಔಷಧಿಗಳ ಮೇಲೆ ಪಾಕಿಸ್ತಾನದ ಗುರುತುಗಳಿರುವುದು ಪತ್ತೆಯಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ನಿನ್ನೆಯಷ್ಟೇ ಜಮ್ಮು ಮತ್ತು ಕಾಶ್ಮೀರದಲ್ಲಿ ವಿವಿಧೆಡೆ ಸೇನಾ ಪಡೆ ಕಾರ್ಯಾಚರಣೆ ನಡೆಸಿತ್ತು. ಉರಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಳೆ ಬಳಿ ಎನ್ ಕೌಂಟರ್ ನಡೆಸಿ 5-6 ಉಗ್ರರನ್ನು ಹತ್ಯೆ ಮಾಡಿತ್ತು. ಕುಪ್ವಾರ ಜಿಲ್ಲೆಯ ನೌಗಾಮ್ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಸೇನೆ ಹತ್ಯೆ ಮಾಡಿತ್ತು. ಈ ವೇಳೆ ನಡೆದ ಗುಂಡಿನ ಚಕಮಕಿ ವೇಳೆ ಓರ್ವ ಯೋಧ ಹುತಾತ್ಮನಾಗಿ, ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. 
ಉಗ್ರರನ್ನು ಹತ್ಯೆ ಮಾಡಿದ ಬಳಿಕ ಸ್ಥಳದಲ್ಲಿ ಕಾರ್ಯಾಚರಣೆಯನ್ನು ಮತ್ತೆ ಮುಂದುವರೆಸಿದ್ದ ಸೇನಾ ಪಡೆ ಉಗ್ರರು ಬಳಸಿದ್ದ ಔಷಧಿಗಳು, ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿತ್ತು. ಉಗ್ರರು ಬಳಸಿದ್ದ ವಸ್ತುಗಳ ಮೇಲೆ ಪಾಕಿಸ್ತಾನ ರಾಷ್ಟ್ರದ ಗುರುತುಗಳಿರುವುದು ಪತ್ತೆಯಾಗಿದ್ದು, ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್