ಕೊಝಿಕೋಡ್: ಕೇರಳ ಸಿಪಿಐ(ಎಂ) ಸಮಿತಿ ಕಚೇರಿ ಮೇಲೆ ಅನಾಮಧೇಯ ವ್ಯಕ್ತಿಗಳು ಸ್ಟೀಲ್ ಬಾಂಬ್ ದಾಳಿ ನಡೆಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
ಕಳೆದ ರಾತ್ರಿ 12.45ರ ಸುಮಾರಿಗೆ ಸಿಪಿಐ(ಎಂ) ಕಚೇರಿ ಮೇಲೆ ಬಾಂಬ್ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವುಗಳಾಗಲೀ, ನಷ್ಟಗಳಾಗಲೀ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.
ಕೆೇಲ ದಿನಗಳ ಹಿಂದಷ್ಟೇ ತಿರುವನಂತಪುರಂ ನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಸಿಪಿಐ(ಎಂ) ಕಚೇರಿ ಮೇಲೆ ಸ್ಟೀಲ್ ಬಾಂಬ್ ದಾಳಿ ನಡೆಸಲಾಗಿದೆ.
ಸ್ಟೀಲ್ ಬಾಂಬ್ ದಾಳಿಗೆ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿರುವ ಸಿಪಿಐ(ಎಂ) ನಾಯಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ.