ಭಿಂಬರ್ ಗಲಿ ಸೆಕ್ಟರ್ ನಲ್ಲಿ ಮತ್ತೆ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ
ಜಮ್ಮು-ಕಾಶ್ಮೀರದ ಭಿಂಬರ್ ಗಲಿ ಸೆಕ್ಟರ್ ನಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ಪಾಕ್ ಪುಂಡಾಟಕ್ಕೆ ತಕ್ಕ ಪ್ರತಿಕ್ರಿಯೆ ನೀಡಿದೆ.
ರಜೌರಿ: ಜಮ್ಮು-ಕಾಶ್ಮೀರದ ಭಿಂಬರ್ ಗಲಿ ಸೆಕ್ಟರ್ ನಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ಪಾಕ್ ಪುಂಡಾಟಕ್ಕೆ ತಕ್ಕ ಪ್ರತಿಕ್ರಿಯೆ ನೀಡಿದೆ.
ರಜೌರಿ ಜಿಲ್ಲೆಯ ಭಿಂಬರ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ಹಾಗೂ ಪಾಕಿಸ್ತಾನ ಸೇನೆಯ ನಡುವೆ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ. ಬೆಳಿಗ್ಗೆ 9:45 ರಿಂದ ಕದನ ವಿರಾಮ ಉಲ್ಲಂಘನೆ ನಡೆದಿದ್ದು, ಸಣ್ಣ ಶಸ್ತ್ರಾಸ್ತ್ರ ಮತ್ತು ಆಟೋಮ್ಯಾಟಿಕ್ಸ್ ನ್ನು ಬಳಸಿ ಪಾಕಿಸ್ತಾನ ದಾಳಿ ನಡೆಸಿದೆ.