ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಿಂದ ಇಫ್ತಾರ್ ಕೂಟ ಆಯೋಜನೆ ಇಲ್ಲ!?
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಬಾರಿ ತಮ್ಮ ಅಧಿಕೃತ ನಿವಾಸದಲ್ಲಿ ಇಫ್ತಾರ್ ಕೂಟವನ್ನು ಆಯೋಜನೆ ಮಾಡುವ ಸಾಧ್ಯತೆ ಕಡಿಮೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಬಾರಿ ತಮ್ಮ ಅಧಿಕೃತ ನಿವಾಸದಲ್ಲಿ ಇಫ್ತಾರ್ ಕೂಟವನ್ನು ಆಯೋಜನೆ ಮಾಡುವ ಸಾಧ್ಯತೆ ಕಡಿಮೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಒಂದು ವೇಳೆ ಯೋಗಿ ಆದಿತ್ಯನಾಥ್ ಅವರು ಇಫ್ತಾರ್ ಕೂಟವನ್ನು ಆಯೋಜನೆ ಮಾಡದೇ ಇದ್ದರೆ, ಉತ್ತರ ಪ್ರದೇಶ ಮಾಜಿ ಸಿಎಂ ರಾಮ್ ಪ್ರಕಾಶ್ ಗುಪ್ತ ನಂತರ ಇಫ್ತಾರ್ ಕೂಟ ಆಯೋಜನೆ ಮಾಡದೇ ಇರುವ ಎರಡನೇ ಮುಖ್ಯಮಂತ್ರಿಯಾಗಲಿದ್ದಾರೆ ಯೋಗಿ ಆದಿತ್ಯನಾಥ್.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ರಾಜನಾಥ್ ಸಿಂಗ್ ಕಲ್ಯಾಣ್ ಸಿಂಗ್ ಸೇರಿದಂತೆ ಅಧಿಕಾರದಲ್ಲಿದ್ದ ಹಲವು ನಾಯಕರು ಈ ಹಿಂದೆ ಇಫ್ತಾರ್ ಕೂಟ ಆಯೋಜಿಸಿದ್ದರು. ಆದರೆ ಈ ಬಾರಿ ಯೋಗಿ ಆದಿತ್ಯನಾಥ್ ಇಫ್ತಾರ್ ಕೂಟ ಆಯೋಜಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸಂಘಟನೆಯಾಗಿರುವ ಮುಸ್ಲೀಂ ರಾಷ್ಟ್ರೀಯ ಮಂಚ್(ಆರ್ ಎಂಎಂ) ಸಸ್ಯಹಾರಿ ಇಫ್ತಾರ್ ಕೂಟವನ್ನು ದೇಶಾದ್ಯಂತ ಆಯೋಜಿಸುತ್ತಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.