ರಾಹುಲ್ ಗಾಂಧಿ 
ದೇಶ

ರಾಹುಲ್ ಗಾಂಧಿಯನ್ನು ಪಪ್ಪು ಎಂದ ಕಾಂಗ್ರೆಸ್ ಸದಸ್ಯ: ಪಕ್ಷದಿಂದ ವಜಾ

ಉತ್ತರ ಪ್ರದೇಶದ ಕಾಂಗ್ರೆಸ್ ಸದಸ್ಯರೊಬ್ಬರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪಪ್ಪು ಎಂದು ಕರೆದಿದ್ದು ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮೀರತ್: ಉತ್ತರ ಪ್ರದೇಶದ ಕಾಂಗ್ರೆಸ್ ಸದಸ್ಯರೊಬ್ಬರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪಪ್ಪು ಎಂದು ಕರೆದಿದ್ದು ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 
ಮಧ್ಯಪ್ರದೇಶದ ಮಂಡಸೌರ್ ನಲ್ಲಿ ರೈತರ ಗಲಭೆ ನಡೆದ ನಂತರ ಅಲ್ಲಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಎಂಬ ವಾಟ್ಸ್ ಆಪ್ ಗ್ರೂಪ್ ನಲ್ಲಿ ಮೆಸೇಜ್ ಕಳಿಸಿರುವ ಪಕ್ಷದ ಸದಸ್ಯ ರಾಹುಲ್ ಗಾಂಧಿ ಅವರನ್ನು ಪಪ್ಪು ಎಂದು ಕರೆದಿದ್ದಾರೆ. 
ಪಪ್ಪು ಅದಾನಿ, ಅಂಬಾನಿ, ಮಲ್ಯ ಅವರೊಂದಿಗೆ ಕೈ ಜೋಡಿಸಬಹುದಿತ್ತು. ಪಪ್ಪು ಸಚಿವ, ಪ್ರಧಾನ ಮಂತ್ರಿಯಾಗಬಹುದಿತ್ತು. ಆದರೆ ಅದ್ಯಾವುದನ್ನೂ ಮಾಡಲಿಲ್ಲ. ಆದರೆ ಮಂಡಸೌರ್ ಗೆ ತೆರಳಿ ಜೀವನ ಕಂಡುಕೊಂಡಿದ್ದಾರೆ ಎಂದು ಕಾಂಗ್ರೆಸ್ ಸದಸ್ಯ ಪ್ರಧಾನ್ ವಾಟ್ಸ್ ಆಪ್ ಗೆ ಮೆಸೇಜ್ ಕಳಿಸಿದ್ದಾರೆ.  
ಈ ಬಗ್ಗೆ ಕಾಂಗ್ರೆಸ್ ನ ಶಿಸ್ತು ಸಮಿತಿ ಅಧ್ಯಕ್ಷ ರಾಮಕೃಷ್ಣ ದ್ವಿವೇದಿ ಪ್ರತಿಕ್ರಿಯೆ ನೀಡಿದ್ದು, ಪ್ರಧಾನ್ ಅವರನ್ನು ಪಕ್ಷದ ಎಲ್ಲಾ ಹುದ್ದೆಯಿಂದ ವಜಾಗೊಳಿಸುತ್ತಿರುವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT