ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಬಿಂಬರ್ ಗಲಿ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿತ್ತು, ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ ಎಂದು ಬುಧವಾರ ತಿಳಿದುಬಂದಿದೆ.
ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, 82 ಎಂಎಂ ಮಾರ್ಟರ್ ಶೆಲ್, ಸ್ವಯಂ ಚಾಲಿತ ಶಸ್ತ್ರಾಸ್ತ್ರಗಳು ಹಾಗೂ ಸಣ್ಣ ಶಸ್ತ್ರಾಸ್ತ್ರಗಳ ಮೂಲಕ ದಾಳಿ ನಡೆಸಿದೆ. ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆಯಷ್ಟೇ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರು. ಇದಕ್ಕೂ ಮುನ್ನ ಪಹಲ್ಗಾಮ್'ನ ಸರ್ನಾಲ್'ನಲ್ಲಿರುವ ಸಿಆರ್ ಪಿಎಫ್ ಶಿಬಿರದ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು. ಇದಾದ ಕೆಲವೇ ನಿಮಿಷಗಳಲ್ಲಿ ಪೊಲೀಸ್ ಠಾಣೆ ಮೇಲೂ ಗ್ರೆನೇಡ್ ದಾಳಿ ನಡೆಸಿದ್ದರು.