ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್.ಪಿ. ವೈದ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸರಣಿ ಗ್ರೆನೇಡ್ ದಾಳಿ ನಡೆಸಿದ್ದು ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್.ಪಿ. ವೈದ್ ಅವರು ಬುಧವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಜ್ಬುಲ್-ಉಲ್-ಮುಜಾಹಿದ್ದೀನ್ ಉಗ್ರ ಸಂಘಟನೆಯ ಹೆಚ್ಚಾಗುತ್ತಿದೆ. ಆದರೆ, ಇತ್ತೀಚೆಗಷ್ಟೇ ನಡೆದ ಸರಣಿ ಗ್ರೆನೇಡ್ ದಾಳಿ ಹಿಂದೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎಂದು ಹೇಳಿದ್ದಾರೆ.
ಗ್ರೆನೇಡ್ ದಾಳಿಯಿಂದ ನಷ್ಟಗಳೇನು ಸಂಭವಿಸಿಲ್ಲ. ಇಬ್ಬರು ಪೇದೆಗಳಿಗೆ ಹಾಗೂ 9 ಸಿಆರ್ ಪಿಎಫ್ ಯೋಧರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಸ್ತುತ ಗಡಿಯಲ್ಲಿನ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ರಂಜಾನ್ ಸಂದರ್ಭದಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚಾಗುತ್ತವೆಂದು ತಿಳಿಸಿದ್ದಾರೆ.
ಈ ಬಾರಿಯ ಅಮರನಾಥ ಯಾತ್ರೆಗೆ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ. ಭಕ್ತರು ಶಾಂತಿಯಿಂದ ಯಾತ್ರೆಯನ್ನು ಪೂರ್ಣಗೊಳಿಸಬಹುದು. ಈಗಾಗಲೇ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.