ಕೇಂದ್ರ ಸಚಿವ ವೆಂಕಯ್ಯ ನಾಯ್ಡು 
ದೇಶ

ರಾಷ್ಟ್ರಪತಿ ಚುನಾವಣೆ: ಜನಾದೇಶ ನಮ್ಮೊಂದಿಗಿದೆ- ಕೇಂದ್ರ ಸಚಿವ ವೆಂಕಯ್ಯ ನಾಯ್ಡು

ಜನಾದೇಶ ಸರ್ಕಾರದ ಪರವಾಗಿದ್ದು, ರಾಷ್ಟ್ರಪತಿ ಚುನಾವಣೆ ಕೂಡ ಜನಾದೇಶದ ಮೂಲಕವೇ ನಡೆಯಲಿದೆ. ಇದನ್ನು ಅರಿತುಕೊಂಡು ಸರ್ಕಾರದೊಂದಿಗೆ ಎಲ್ಲರೂ ಸಹಕಾರ ನೀಡಬೇಕೆಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಬುಧವಾರ ಹೇಳಿದ್ದಾರೆ...

ನವದೆಹಲಿ: ಜನಾದೇಶ ಸರ್ಕಾರದ ಪರವಾಗಿದ್ದು, ರಾಷ್ಟ್ರಪತಿ ಚುನಾವಣೆ ಕೂಡ ಜನಾದೇಶದ ಮೂಲಕವೇ ನಡೆಯಲಿದೆ. ಇದನ್ನು ಅರಿತುಕೊಂಡು ಸರ್ಕಾರದೊಂದಿಗೆ ಎಲ್ಲರೂ ಸಹಕಾರ ನೀಡಬೇಕೆಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಬುಧವಾರ ಹೇಳಿದ್ದಾರೆ. 
ರಾಷ್ಟ್ರಪತಿ ಚುನಾವಣೆ ಕುರಿತಂತೆ ಕೆಲ ದಿನಗಳ ಹಿಂದಷ್ಟೇ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಹಿರಿಯ ಸಚಿವರಾದ ರಾಜನಾಥ ಸಿಂಗ್ ಹಾಗೂ ಅರುಣ್ ಜೇಟ್ಲಿಯವರೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸಿದ್ದತು. ರಾಷ್ಟ್ರಪತಿ ಚುನಾವಣೆಗೂ ಮುನ್ನ ಬಿಜೆಪಿ 3 ಸದಸ್ಯರ ಚುನಾವಣಾ ಸಮಿತಿ ರಚಿಸಲು ತೀರ್ಮಾನಿಸಿದ್ದು, ಅಮಿತ್ ಶಾ ನೇತೃತ್ವದ ಈ ಸಮತಿಯಲ್ಲಿ ನಾಯ್ಡು, ರಾಜನಾಥ ಸಿಂಗ್ ಹಾಗೂ ಅರುಣ್ ಜೇಟ್ಲಿಯವರು ಇದ್ದಾರೆಂದು ಹೇಳಲಾಗುತ್ತಿದೆ. 
ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಎನ್'ಡಿಎ ವಿರೋಧ ಮಿತ್ರಪಕ್ಷಗಳ ಜತೆಗೆ ಸಮಿತಿಯ ಸದಸ್ಯರು ಸಮಾಲೋಚನೆ ನಡೆಸಲಿದ್ದು, ವಾರದೊಳಗೆ ಈ ಸಮಾಲೋಚನೆ ನಡೆಸಿದ ಬಳಿಕ ಬಿಜೆಪಿ ತನ್ನ ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಣೆ ಮಾಡಲಿದೆ. 
ಆಯ್ಕೆ ಪ್ರಕ್ರಿಯೆಗಳನ್ನು ಈಗಾಗಲೇ ನಾವು ಆರಂಭಿಸಿದ್ದೇವೆ. ಅಮಿತ್ ಶಾ ಹಾಗೂ ಜೇಟ್ಲಿಯವರೊಂದಿಗೆ ಮಾತುಕತೆ ನಡೆಸಲಾಗಿದೆ. ಪ್ರಸ್ತುತ ರಾಜನಾಥ ಸಿಂಗ್ ಅವರು ಮಿಜೋರಾಂನಲ್ಲಿದ್ದು, ಅವರೊಂದಿಗೂ ಸಮಾಲೋಚನೆ ನಡೆಸಿದ್ದೇವೆ. ಶೀಘ್ರದಲ್ಲಿಯೇ ಎಲ್ಲಾ ನಾಯಕರೊಂದಿಗೂ ಮಾತುಕತೆ ನಡೆಸಿ, ಇತರೆ ರಾಜಕೀಯ ಪಕ್ಷಗಳೊಂದಿಗೂ ಮಾತುಕತೆ ನಡೆಸುತ್ತೇವೆ. ಎಲ್ಲಾ ಸಹಕಾರ, ಬೆಂಬಲವನ್ನು ಪಡೆಯುತ್ತೇವೆಂದು ನಾಯ್ಡು ಅವರು ತಿಳಿಸಿದ್ದಾರೆ. 
ನಾವು ಆಡಳಿತಾರೂಢ ಪಕ್ಷವಾಗಿದ್ದು, ನಮಗೆ ನಮ್ಮದೇ ಆದ ಜವಾಬ್ದಾರಿಗಳಿರುತ್ತವೆ. ಹೀಗಾಗಿ ಒಮ್ಮತದ ಮೂಲಕ ಆಯ್ಕೆ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳ್ನ ಮಾಡುತ್ತಿದ್ದೇವೆ. ಎಲ್ಲರ ಸಹಕಾರಕ್ಕಾಗಿ ಯತ್ನ ನಡೆಸುತ್ತಿದ್ದೇವೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!