ಪ್ರತಿಪಕ್ಷಗಳ ಸಭೆ 
ದೇಶ

ರಾಷ್ಟ್ರಪತಿ ಚುನಾವಣೆ: ಕಾರ್ಯತಂತ್ರ ಚರ್ಚೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಹೊರಗಿಟ್ಟ ಪ್ರತಿಪಕ್ಷಗಳ ಗುಂಪು!

ಮುಂದಿನ ರಾಷ್ಟ್ರಪತಿ ಯಾರಾಗಲಿದ್ದಾರೆ? ಇದು ಸಧ್ಯಕ್ಕೆ ದೇಶಾದ್ಯಂತ ಕುತೂಹಲ ಮೂಡಿಸುತ್ತಿರುವ ಸಂಗತಿಯಾಗಿದೆ.

ನವದೆಹಲಿ: ಮುಂದಿನ ರಾಷ್ಟ್ರಪತಿ ಯಾರಾಗಲಿದ್ದಾರೆ? ಇದು ಸಧ್ಯಕ್ಕೆ ದೇಶಾದ್ಯಂತ ಕುತೂಹಲ ಮೂಡಿಸುತ್ತಿರುವ ಸಂಗತಿಯಾಗಿದೆ. ಎನ್ ಡಿಎ ಅಭ್ಯರ್ಥಿಯ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪ್ರತಿಪಕ್ಷಗಳು ಚಿಂತನೆ ನಡೆಸಿದ್ದು, ಕಾರ್ಯತಂತ್ರ ಹೆಣೆಯುವುದರಲ್ಲಿ ಮಗ್ನವಾಗಿವೆ. ಇದಕ್ಕಾಗಿ ಬಹುತೇಕ ಎಲ್ಲಾ ಪ್ರತಿಪಕ್ಷಗಳು ಒಗ್ಗಟ್ಟಾಗಿ ಚರ್ಚೆ ನಡೆಸುತ್ತಿವೆ. ಆದರೆ ಆಮ್ ಆದ್ಮಿ ಪಕ್ಷವನ್ನು ಮಾತ್ರ ಪ್ರತಿಪಕ್ಷಗಳ ತಂಡ ಹೊರಗಿಟ್ಟಿವೆ. 
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಆಮ್ ಆದ್ಮಿ ಪಕ್ಷವನ್ನೂ ಚರ್ಚೆಯಲ್ಲಿ ಸೇರಿಸಿಕೊಳ್ಳಬೇಕೆಂಬ ಸಲಹೆ ನೀಡಿದ್ದರಾದರೂ ಕಾಂಗ್ರೆಸ್ ನ ಗುಲಾಮ್ ನಬಿ ಆಜಾದ್, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಇತರ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. 
ಜೆಡಿಯು ನಾಯಕ ಶರದ್ ಯಾದವ್ ಸಹ ರಾಷ್ಟ್ರಪತಿ ಚುನಾವಣೆಯ ವಿಷಯದ ಚರ್ಚೆ, ಕಾರ್ಯತಂತ್ರದಲ್ಲಿ ಆಮ್ ಆದ್ಮಿ ಪಕ್ಷವನ್ನು ಸೇರಿಸಿಕೊಳ್ಳುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರಂತೆ. ಆಮ್ ಆದ್ಮಿ ಪಕ್ಷ ಬಿಜೆಪಿಯ ಬಿ ಟೀಂ ಇದ್ದಂತೆ ಆದ್ದರಿಂದ ಅದನ್ನು ಪ್ರತಿಪಕ್ಷಗಳ ಗುಂಪಿನಿಂದ ಹೊರಗಿಡಬೇಕೆಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್