ನನ್ನ ಮೇಲೆ ಮೊಟ್ಟೆ, ಟೊಮೆಟೊ ಎಸೆದರೆ ನಾನು ಆಮ್ಲೆಟ್ ಮಾಡಿಕೊಳ್ಳುತ್ತೇನೆ: ಕೇಂದ್ರ ಸಚಿವ ಸುಪ್ರಿಯೋ
ನನ್ನ ಮೇಲೆ ಮೊಟ್ಟೆ, ಟೊಮೆಟೊ ಎಸೆಯುವುದಾದರೆ ಜೊತೆಗೆ ಈರುಳ್ಳಿಯನ್ನು ಎಸೆಯಿರಿ ಅದರಿಂದ ನಾನು ಆಮ್ಲೆಟ್ ಮಾಡಿಕೊಳ್ಳುತ್ತೇನೆ ಎಂದು ಕೇಂದ್ರ...
ಭುವನೇಶ್ವರ್: ನನ್ನ ಮೇಲೆ ಮೊಟ್ಟೆ, ಟೊಮೆಟೊ ಎಸೆಯುವುದಾದರೆ ಜೊತೆಗೆ ಈರುಳ್ಳಿಯನ್ನು ಎಸೆಯಿರಿ ಅದರಿಂದ ನಾನು ಆಮ್ಲೆಟ್ ಮಾಡಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಅವರು ವಿಪಕ್ಷದವರಿಗೆ ಮನವಿ ಮಾಡಿದ್ದಾರೆ.
ಎನ್ಡಿಎ ಸರ್ಕಾರದ ಕಾರ್ಯಕ್ರಮ ನಿಮಿತ್ತ ಒಡಿಶಾಕ್ಕೆ ತೆರಳಿದ ಸುಪ್ರಿಯೋ ಅವರು ಭುವನೇಶ್ವರದ ಬಿಜು ಅಂತಾರಾಷ್ಟ್ರೀಯ ವಿಮಾನದಲ್ಲಿ ಮಾತನಾಡಿ ಈ ರೀತಿಯ ಹೇಳಿಕೆ ನೀಡಿದ್ದಾರೆ.
ಇದೇ ವೇಳೆ ಬಿಜೆಡಿ ಮತ್ತು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸುಪ್ರಿಯೋ ಅವರು, ಒಡಿಶಾದಲ್ಲಿನ ರಾಜಕೀಯ ನೋಡಿದರೆ ಪಶ್ಚಿಮ ಬಂಗಾಳದ ರಾಜಕೀಯ ಹೆಚ್ಚು ಉತ್ತಮವಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳು ಒಡಿಶಾದ ಬಡ ಜನತೆಗೆ ಮುಟ್ಟುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಜನರು ಬದುಕುವಂತಾಗಿದೆ ಎಂದು ಹೇಳಿದರು.
ಇತ್ತೀಚೆಗೆ ಬಾಬುಲ್ ಸುಪ್ರಿಯೋ ಅವರು ಎಲ್ಲಿಗೆ ಹೋದರು ಅವರ ಮೇಲೆ ಕಲ್ಲು ಅಥವಾ ಮೊಟ್ಟೆಯಿಂದ ಹೊಡೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರಿಯೋ ಅವರು ಈ ರೀತಿಯ ಹೇಳಿಕೆಯನ್ನು ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.