ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಪಾಕ್ ಕ್ರಿಕೆಟ್ ತಂಡ ಗೆಲ್ಲುತ್ತಿದ್ದಂತೆಯೇ ಕಾಶ್ಮೀರದಲ್ಲಿ ಪಾಕ್ ಪರ ಘೋಷಣೆ!

ಅತ್ತ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಗೆಲ್ಲುತ್ತಿದ್ದಂತೆಯೇ ಇತ್ತ ಕಾಶ್ಮಿರದಲ್ಲಿ ಪ್ರತ್ಯೇಕತಾವಾದಿಗಳು ಸಂಭ್ರಮಾಚರಣೆಯಲ್ಲಿ ತೊಡಗಿ ಪಾಕ್ ಪರ ಘೋಷಣೆ ಕೂಗಿದ್ದಾರೆ.

ಕಾಶ್ಮೀರಿ ಪ್ರತ್ಯೇಕತಾವಾದಿ
Srinivas Rao BV
Updated On : 15 Jun 2017, 12:12 pm
ಜಮ್ಮು: ಅತ್ತ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಗೆಲ್ಲುತ್ತಿದ್ದಂತೆಯೇ ಇತ್ತ ಕಾಶ್ಮಿರದಲ್ಲಿ ಪ್ರತ್ಯೇಕತಾವಾದಿಗಳು ಸಂಭ್ರಮಾಚರಣೆಯಲ್ಲಿ ತೊಡಗಿ ಪಾಕ್ ಪರ ಘೋಷಣೆ ಕೂಗಿದ್ದಾರೆ. 
ಪಾಕಿಸ್ತಾನ ಫೈನಲ್ಸ್ ಗೆ ಪ್ರವೇಶಿಸುತ್ತಿದ್ದಂತೆಯೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿರುವ ಕಾಶ್ಮೀರ ಪ್ರತ್ಯೇಕತಾವಾದಿಗಳು ಪಾಕ್ ಪರ ಘೋಷಣೆ ಕೂಗಿದ್ದಾರೆ. ಅಷ್ಟೇ ಅಲ್ಲದೇ ಪ್ರತ್ಯೇಕತಾವಾದಿ ನಾಯಕ ಮಿರ್ವಾಜಾ ಉಮರ್ ಫಾರೂಕ್ ಟ್ವಿಟರ್ ನಲ್ಲಿ ಪಾಕಿಸ್ತಾನದ ಪರ ಟ್ವೀಟ್ ಮಾಡಿದ್ದು ಫೈನಲ್ ಪಂದ್ಯಕ್ಕಾಗಿ ಪಾಕಿಸ್ತಾನಕ್ಕೆ ಶುಭ ಹಾರೈಸಿದ್ದಾರೆ. 
"ಪ್ರಾರ್ಥನೆ ಮುಕ್ತಾಯಗೊಳಿಸುತ್ತಿದ್ದಂತೆಯೇ ಹೊರಗೆ ಪಟಾಕಿ ಸಿಡಿಸುತ್ತಿದ್ದ ಶಬ್ದ ಕೇಳಿತು. ಪಾಕಿಸ್ತಾನ ಅತ್ಯುತ್ತಮ ಆಟ ಆಡಿದೆ. ಫೈನಲ್ಸ್ ಗೆ ಒಳ್ಳೆಯದಾಗಲಿ ಎಂದು ಹುರಿಯತ್ ಫೋರಂ ನ ಅಧ್ಯಕ್ಷ ಮಿರ್ವಾಜಾ ಉಮರ್ ಫಾರೂಕ್  ಟ್ವೀಟ್ ಮಾಡಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement