ದೇಶ

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ?

Shilpa D
ನವದೆಹಲಿ: ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಲು ಎನ್ ಡಿಎ ನಿರ್ಧರಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಸುಷ್ಮಾ ಸ್ವರಾಜ್ ಅವರನ್ನು ಎನ್'ಡಿಎ ಅಭ್ಯರ್ಥಿಯನ್ನಾಗಿ ನಿಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನ್ಯೂಸ್ 18 ತನ್ನ  ವರದಿಯಲ್ಲಿ ಉಲ್ಲೇಖಿಸಿದೆ.
ರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ಇಟ್ಟುಕೊಂಡಿರುವ ಎಲ್ಲಾ ಮಾನದಂಡಗಳು ಸುಷ್ಮಾ ಅವರಿಗೆ ಸರಿಹೊಂದುತ್ತಿವೆ. 
ಎಲ್ಲಾ ಪಕ್ಷಗಳು ಸೇರಿ ಒಮ್ಮತದಿಂದ ರಾಷ್ಟ್ರಪತಿ ಆಯ್ಕೆ ಮಾಡಬೇಕೆಂಬ ಬಿಜೆಪಿ ಪ್ರಯತ್ನಕ್ಕೆ ಸುಷ್ಮಾ ಸ್ವರಾಜ್ ಸೂಕ್ತ ವ್ಯಕ್ತಿ ಆಗಬಹುದೆಂಬ ಲೆಕ್ಕಾಚಾರವೂ ಇದೆ. 
ಏಕೆಂದರೆ ಮಮತಾ ಬ್ಯಾನರ್ಜಿ, ನವೀನ್ ಪಟ್ನಾಯಕ್  ಸೇರಿದಂತೆ ವಿಪಕ್ಷಗಳು ಸುಷ್ಮಾ ಸ್ವರಾಜ್ ಅವರನ್ನು ವಿರೋಧಿಸುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.
ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್, ಜಾರ್ಖಂಡ್ ರಾಜ್ಯಪಾಲರಾದ ದ್ರೌಪದಿ ಮುರ್ಮು, ಎಲ್'ಕೆ ಆಡ್ವಾಣಿ, ಮುರಳಿ ಮನೋಹರ್ ಜೋಷಿ ಅವರ ಹೆಸರುಗಳು ಕೇಳಿ ಬರುತ್ತಿವೆ.
SCROLL FOR NEXT