ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ 
ದೇಶ

ಮತ್ತೆ ಇಬ್ಬರು ರೈತರ ಆತ್ಮಹತ್ಯೆ: ಮಧ್ಯಪ್ರದೇಶ ಸಿಎಂ ಮೇಲೆ ಹೆಚ್ಚಿದ ಒತ್ತಡ

ಮಧ್ಯಪ್ರದೇಶದಲ್ಲಿ ರೈತರ ಸಾವಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮತ್ತಿಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಇದರಿಂದಾಗಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಮೇಲಿನ ಒತ್ತಡ ಮತ್ತಷ್ಟು...

ಭೋಪಾಲ್: ಮಧ್ಯಪ್ರದೇಶದಲ್ಲಿ ರೈತರ ಸಾವಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮತ್ತಿಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಇದರಿಂದಾಗಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಮೇಲಿನ ಒತ್ತಡ ಮತ್ತಷ್ಟು ಹೆಚ್ಚಾಗತೊಡಗಿದೆ. 
ಮಧ್ಯಪ್ರದೇಶದ ಹೊಶಂಗಾಬಾದ್ ಮತ್ತು ಶಿವಪುರಿ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ಹೊಶಂಗಾಬಾದ್ ಜಿಲ್ಲೆ ಚಪ್ಲಸಾರ್ ಗ್ರಾಮದ ನರ್ಮದಾ ಪ್ರಸಾದ್ ಯಾದವ್ (50) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲ ಮಾಡಿಕೊಂಡದ್ದ ಯಾದವ್ ಅವರು ವರ್ಷವಾದರೂ ಪಡೆದ ಸಾಲವನ್ನು ತೀರಿಸಿರಲಿಲ್ಲ. ಹೀಗಾಗಿ ಸಾಲಕೊಟ್ಟ ವ್ಯಕ್ತಿ ಯಾದವ್ ಅವರ ಟ್ರ್ಯಾಕ್ಟರ್ ನ್ನು ತೆಗೆದುಕೊಂಡಿದ್ದರು. ಇದರಿಂದ ನೊಂದ ಯಾದವ್ ಅವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 
ಶಿವಪುರಿ ಜಿಲ್ಲೆ ಇಂದಾರ್ ಪ್ರದೇಶದಲ್ಲಿರುವ ಬಿನೆಕಾ ಗ್ರಾಮದಲ್ಲಿ ಕಾಳ ಕೇವತ್ (55) ವರ್ಷದ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲ ಮಾಡಿ ಬೆಳೆದ ಬೆಳೆ ಫಲ ನೀಡದಿದ್ದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಕುಟುಂಬಸ್ಥರು ಹೇಳಿದ್ದಾರೆ. 
ಇದರಂತೆ ಮಧ್ಯಪ್ರದೇಶದಲ್ಲಿ ಕಳೆದ 72 ಗಂಟೆಗಳಲ್ಲಿ ಒಟ್ಟು 7 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈತರ ಸಾಲ ಮನ್ನಾ ಮಾಡುವಂತೆ ಈಗಾಗಲೇ ಮಧ್ಯಪ್ರದೇಶದಲ್ಲಿ ಸಾಕಷ್ಟು ಹೋರಾಟಗಳು ನಡೆಯುತ್ತಿದ್ದು, ಈ ನಡುವೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮುಖ್ಯಮಂತ್ರಿ ಚೌಹಾಣ್ ಅವರ ಮೇಲಿನ ಒತ್ತಡ ಮತ್ತಷ್ಟು ಹೆಚ್ಚಾಗತೊಡಗಿದೆ. ವಿಪಕ್ಷಗಳೂ ಕೂಡ ಸರ್ಕಾರದ ವಿರುದ್ಧ ಸಾಕಷ್ಟು ಟೀಕೆ ಹಾಗೂ ವಿರೋಧಗಳನ್ನು ವ್ಯಕ್ತಪಡಿಸತೊಡಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!