ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅಚಬಾಲ್ ನಲ್ಲಿ ಪೊಲೀಸರ ಮೇಲೆ ಶುಕ್ರವಾರ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಠಾಣಾಧಿಕಾರಿ ಸೇರಿದಂತೆ ಐವರು ಪೊಲೀಸರು ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಸಂಜೆ ಠಾಣಾಧಿಕಾರಿ ಹಾಗೂ ಪೊಲೀಸರು ತೆರಳುತ್ತಿದ್ದ ವಾಹನದ ಮೇಲೆ ಭಾರಿ ಶಸ್ತ್ರಾಸ್ತ್ರ ಹೊಂದಿದ್ದ ಸುಮಾರು 10 ಉಗ್ರರ ತಂಡ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಜುನೈದ್ ಮಟ್ಟು ಹತ್ಯೆಗೆ ಪ್ರತಿಕಾರವಾಗಿ ಉಗ್ರರು ಈ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಭಾರತೀಯ ಸೇನೆ ಮತ್ತು ಕಾಶ್ಮೀರ ಪೊಲೀಸರು ಪರಾರಿಯಾಗಿರುವ ಉಗ್ರರಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.