ಜಮ್ಮು-ಕಾಶ್ಮೀರದಲ್ಲಿ ಕಲ್ಲು ತೂರಾಟ: ಓರ್ವ ಯುವಕ ಸಾವು
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ರಂಗ್ರೇಥ್ ಪ್ರದೇಶದಲ್ಲಿ ದುಷ್ಕರ್ಮಿಗಳ ಗುಂಪುಗಳು ಭದ್ತಾ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದು, ಈ ವೇಳೆ ನಡೆದ ಘರ್ಷಣೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದಾರೆಂದು...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ರಂಗ್ರೇಥ್ ಪ್ರದೇಶದಲ್ಲಿ ದುಷ್ಕರ್ಮಿಗಳ ಗುಂಪುಗಳು ಭದ್ತಾ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದು, ಈ ವೇಳೆ ನಡೆದ ಘರ್ಷಣೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
ನಿನ್ನೆ ಸಂಜೆ ರಸ್ತೆಯಲ್ಲಿ ನಿಂತಿದ್ದ ಭದ್ರತಾ ಸಿಬ್ಬಂದಿಗಳ ವಾಹನಗಳ ಮೇಲೆ ಗುಂಪೊಂದು ಇದ್ದಕ್ಕಿದ್ದಂತೆ ಕಲ್ಲು ತೂರಾಟ ನಡೆಸಿದೆ. ಈ ವೇಳೆ ಭದ್ರತಾ ಸಿಬ್ಬಂದಿಗಳು ಘರ್ಷಣೆ ಹತ್ತಿಕ್ಕುವ ಸಲುವಾಗಿ ಗುಂಡು ಹಾರಿಸಿದ್ದು, ಪರಿಣಾಮ 22 ವರ್ಷದ ಯುವಕನಿಗೆ ಗಂಭೀರವಾದ ಗಾಯವಾಗಿದೆ. ಕೂಡಲೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವಕರ ಸಾವನ್ನಪ್ಪಿದ್ದಾರೆಂದು ಮೂಲಗಳು ತಿಳಿಸಿವೆ.
ಕಲ್ಲು ತೂರಾಟ ಹಿನ್ನಲೆಯಲ್ಲಿ ಬಂಡಿಪೋರಾದಲ್ಲಿನ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಇದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.