ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ವಿಮಾನ ನಿಲ್ದಾಣ ರಸ್ತೆಯೊಂದರಲ್ಲಿ ನಿಂತಿದ್ದ ಗಸ್ತು ಪೊಲೀಸ್ ಪಡೆ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಪೊಲೀಸ್ ಹುತಾತ್ಮನಾಗಿ ಇಬ್ಬರಿಗೆ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ.
ಶ್ರೀನಗರ ಹೈದೆರ್ಪೋರಾ ಬಳಿ ಕರ್ತವ್ಯ ನಿರತ ಪೊಲೀಸ್ ಪಡೆ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಗಾಯಗೊಂಡ ಪೊಲೀಸರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಉಗ್ರರ ದಾಳಿ ಹಿನ್ನಲೆಯಲ್ಲಿ ಶ್ರೀನಗರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ತಲೆಮರೆಸಿಕೊಂಡಿರುವ ಉಗ್ರರಿಗಾಗಿ ಈಗಾಗಲೇ ಸೇನಾ ಪಡೆ ಕಾರ್ಯಾಚರಣೆ ಆರಂಭಿಸಿದೆ.